ಅಮಾನತುಗೊಂಡ ಸಂಸದರು ಸಂಸತ್ತಿನ ಚೇಂಬರ್, ಲಾಬಿ , ಗ್ಯಾಲರಿಗೆ ಪ್ರವೇಶಿಸುವಂತಿಲ್ಲ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆಯ (Loksabha) 9೭ ಹಾಗೂ ರಾಜ್ಯಸಭೆಯಿಂದ ಅಮಾನತಾಗಿರುವ (Rajyasabha) 46 ಒಟ್ಟು 14೩ ಮಂದಿ ಸಂಸದರು ಸಂಸತ್ತಿನ ಚೇಂಬರ್, ಲಾಬಿ ಹಾಗೂ ಗ್ಯಾಲರಿಗೆ ಪ್ರವೇಶಿಸುವಂತಿಲ್ಲ ಎಂದು ಲೋಕಸಭಾ ಕಚೇರಿಯಿಂದ (Loksabha Office) ಸುತ್ತೋಲೆ ಹೊರಡಿಸಲಾಗಿದೆ.

ಸಂಸತ್ ಭವನದಲ್ಲಿ ಉಂಟಾದ ಭದ್ರತಾ ಲೋಪ (Security breach in Lok Sabha) ಕುರಿತ ಚರ್ಚೆಗೆ ಒತ್ತಾಯಿಸಿ ಉಭಯ ಸದನಗಳಲ್ಲಿ ಅಶಿಸ್ತಿನ ವರ್ತನೆ ತೋರಲಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿನ ವಿವಿಧ ಪಕ್ಷಗಳ ಸದಸ್ಯರನ್ನು ಅಮಾನತುಗೊಳಿಸಲಾಗಿತ್ತು.

ಅಮಾನತುಗೊಂಡ ಎಲ್ಲಾ ಸಂಸದರಿಗೆ ಸಂಸತ್ತಿನ ಮೊಗಸಾಲೆ, ಕೋಣೆ ಹಾಗೂ ಗ್ಯಾಲರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಯಾವುದೇ ಸಂಸದೀಯ ಸಮಿತಿಯ ಸಭೆಗೆ ಹಾಜರಾಗಲು ಅವರಿಗೆ ಅವಕಾಶವಿರಲ್ಲ. ಅಮಾನತು ಅವಧಿಯಲ್ಲಿ ಯಾವುದೇ ಸೂಚನೆಗಳನ್ನು ನೀಡುವಂತಿಲ್ಲ, ಸಮಿತಿಗಳಿಗೆ ನಡೆಯುವ ಯಾವುದೇ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ. ಅಧಿವೇಶನದ ಉಳಿದ ಅವಧಿಗೆ ಅವರನ್ನು ಸದನದ ಸೇವೆಯಿಂದ ಅಮಾನತುಗೊಳಿಸಿದರೆ, ಅವರು ಅಮಾನತು ಅವಧಿಯಲ್ಲಿ ದೈನಂದಿನ ವೇತನದ ಭತ್ಯೆಗೂ ಅರ್ಹರಾಗಿರುವುದಿಲ್ಲ ಎಂದು ತಿಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!