Monday, November 28, 2022

Latest Posts

ತೂಗು ಸೇತುವೆ ದುರಂತ: ಸಂತಾಪ ಸೂಚಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಗುಜರಾತ್ ನ ಮೊರ್ಬಿಯಲ್ಲಿ ಉಂಟಾದ ತೂಗು ಸೇತುವೆ ಕುಸಿತಕ್ಕೆ 40 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಸುಮಾರು100 ಮಂದಿಗೆ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದಾರೆ. ಈ ಘಟನೆ ನನ್ನನ್ನು ಚಿಂತೆಗೀಡುಮಾಡಿದೆ. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಜನರೊಂದಿಗೆ ಇವೆ. ಸಂತ್ರಸ್ತರಿಗೆ ಸರ್ಕಾರ ಸಹಾಯ ಮಾಡಲಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ, ಪರಿಹಾರ ಮತ್ತು ರಕ್ಷಣಾ ಪ್ರಯತ್ನಗಳು ಸಂತ್ರಸ್ತರಿಗೆ ಸಹಾಯವನ್ನು ತರುತ್ತದೆ ಎಂದು ಹೇಳಿದ್ದಾರೆ.

ದುರಂತ ಕುರಿತು ಈಗಾಗಲೇ ಪ್ರಧಾನಿ ಮೋದಿ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಕರೆ ಮಾಡಿ ಮಾಹಿತಿ ಪಡೆದಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!