ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಯ 18 ಶಾಸಕರ ಅಮಾನತು ನಿರ್ಧಾರವನ್ನು ಹಿಂಪಡೆಯಲು ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ನಿರ್ಧರಿಸಿದ್ದಾರೆ.
ಇಂದು ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸ್ಪೀಕರ್ ಯು.ಟಿ ಖಾದರ್, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ಕಾನೂನು ಸಚಿವ ಹೆಚ್.ಕೆ ಪಾಟೀಲ್, ಸೇರಿದಂತೆ ಇತರೆ ಪ್ರಮುಖರ ನೇತೃತ್ವದಲ್ಲಿ ಸಂಧಾನಸಭೆ ನಡೆಯಿತು.
ಸಭೆಯಲ್ಲಿ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ್ದನ್ನು ಹಿಂಪಡೆಯಲು ಸ್ಪೀಕರ್ ಯು.ಟಿ ಖಾದರ್ ಅವರು ತೀರ್ಮಾನ ಕೈಗೊಂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅಶೋಕ್, ನಾಳೆ (ಸೋಮವಾರ) ಸ್ಪೀಕರ್ ಅವರು ಹಜ್ ಯಾತ್ರೆಗೆ ಹೋಗಲಿದ್ದಾರೆ. ಅದ್ದರಿಂದ ನಾಳೆ ಸ್ಪೀಕರ್ ಅಧಿಕಾರಿಗಳ ಸಭೆ ಕರೆದು ಆದೇಶ ಹೊರಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.