ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಕುಸ್ತಿ ಒಕ್ಕೂಟದ ಮೇಲೆ ವಿಧಿಸಲಾಗಿದ್ದ ಅಮಾನತು ಆದೇಶವನ್ನು ಕ್ರೀಡಾ ಸಚಿವಾಲಯ ವಾಪಾಸ್ ಪಡೆದಿದೆ.
ಮುಂದಿನ ಸೂಚನೆವರೆಗೆ ಒಕ್ಕೂಟದ ದೈನಂದಿನ ಕಾರ್ಯಾಚರಣೆಗಳ ಮೇಲ್ವಿಚಾರಣೆ ಮತ್ತು ನಿರ್ವಹಣೆಯಿಂದ ದೂರವಿರಲು ಹೊಸದಾಗಿ ಆಯ್ಕೆಯಾದ ಕಾರ್ಯಕಾರಿ ಸಮಿತಿಗೆ ಸೂಚನೆ ನೀಡಿದೆ.
ಕ್ರೀಡೆ ಮತ್ತು ಕ್ರೀಡಾಪಟುಗಳ ಹಿತದೃಷ್ಟಿಯಿಂದ ಸಚಿವಾಲಯವು ಅಮಾನತು ರದ್ದುಗೊಳಿಸಲು ನಿರ್ಧರಿಸಿದೆ ಎಂದು ಸಚಿವಾಲಯ ಆದೇಶದಲ್ಲಿ ತಿಳಿಸಿದೆ.