ಹೊಸದಿಗಂತ ವರದಿ,ಪಾಂಡವಪುರ :
ಪತ್ನಿ ಜೊತೆ ಅಕ್ರಮ ಸಂಬಂಧ ಹೊಂದಿರುವ ಅನುಮಾನ ವ್ಯಕ್ತಪಡಿಸಿ ವ್ಯಕ್ತಿಯೊಬ್ಬ ಯುವಕನೊಬ್ಬನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಶಂಭೂನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಗ್ರಾಮದ ಮಂಜು(26) ಗುಂಡಿನ ದಾಳಿಗೊಳಗಾದ ಯುವಕ. ಅದೇ ಗ್ರಾಮದ ಶಿವರಾಜು (37)ಎಂಬಾತ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ ಆರೋಪಿಯಾಗಿದ್ದಾನೆ.