Wednesday, June 29, 2022

Latest Posts

ಸಮುದಾಯಗಳಿಗೆ ಒಮಿಕ್ರಾನ್ ಹರಡಿರುವ ಸಂಶಯ: ಪಾಸಿಟಿವ್ ಕೇಸ್‌ಗಳ ಜೀನೋಮ್ ಸೀಕ್ವೆನ್ಸಿಂಗ್ ನಡೆಸಲು ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದ ಏಳು ರಾಜ್ಯಗಳ ಎಂಟು ನಗರಗಳಲ್ಲಿ ಒಮಿಕ್ರಾನ್ ಸೋಂಕು ಸಮುದಾಯಕ್ಕೆ ಹರಡಿರುವ ಸಂಶಯ ಹಿನ್ನೆಲೆ ಕೇಂದ್ರ ಸರ್ಕಾರ ನಿರ್ಧಾರವೊಂದಕ್ಕೆ ಬಂದಿದೆ.

ಕೋವಿಡ್ ಪಾಸಿಟಿವ್ ಆರ್‌ಟಿಪಿಸಿಆರ್ ಸ್ಯಾಂಪಲ್‌ಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ನಡೆಸಲು ನಿರ್ಧರಿಸಲಾಗಿದೆ.
ಮುಂಬೈ, ಪುಣೆ, ದೆಹಲಿ, ಚೆನ್ನೈ, ಬೆಂಗಳೂರು, ಹೈದರಾಬಾದ್. ಭುವನೇಶ್ವರ ಮತ್ತು ಕೋಲ್ಕತ್ತಾ ನಗರಗಳಲ್ಲಿ ಒಮಿಕ್ರಾನ್ ಸೋಂಕು ಹೆಚ್ಚಳವಾಗಿದೆ.

ಈ ಹಂತದಲ್ಲಿ ದೃಢಪಡಿಸಬೇಕಾದ ಪ್ರಮುಖ ಸಾಂಕ್ರಾಮಿಕ ರೋಗಶಾಸ್ತ್ರದ ಸೂಚ್ಯಂಕವೆಂದರೆ ದೊಡ್ಡ ನಗರಗಳಲ್ಲಿನ ಸಮುದಾಯದಲ್ಲಿ ಒಮಿಕ್ರಾನ್ ಪ್ರಸರಣವಾಗಿದೆ ಎಂದು ಏಳು ರಾಜ್ಯ ಸರ್ಕಾರಗಳಿಗೆ ಪತ್ರ ಬರೆಯಲಾಗಿದೆ ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ಮುಖ್ಯಸ್ಥ ಸುಜೀತ್ ಕುಮಾರ್ ಸಿಂಗ್ ಹೇಳಿದ್ದಾರೆ. ಈ ಪತ್ರಗಳಲ್ಲಿ ಜೀನೋಮ್ ಸೀಕ್ವೆನ್ಸಿಂಗ್ ಅನುಕ್ರಮಕ್ಕಾಗಿ ಕಳುಹಿಸಲಾಗುವುದು ಎಂದು ತಿಳಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss