ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯಲ್ಲಿರುವ ಲಾಡ್ಜ್ ವೊಂದರಲ್ಲಿ ಯುವತಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಯುವಕ ಮತ್ತು ಯುವತಿ ಏಪ್ರಿಲ್ 1 ರಂದು ಲಾಡ್ಜ್ ನಲ್ಲಿ ರೂಮ್ ಬಾಡಿಗೆ ಪಡೆದಿದ್ದರು. ಇದೀಗ ಅದೇ ರೂಮಿನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ.
ಹೋಟೆಲ್ ಸಿಬ್ಬಂದಿ ಕೊಠಡಿಗೆ ನುಗ್ಗಿ ಪರಿಶೀಲಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಯುವತಿ ಜೊತೆಗಿದ್ದ ಯುವಕ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ತಿರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವತಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ತೀರ್ಥಹಳ್ಳಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.