ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಬಳ್ಳಾಪುರದ ಕಾಲೇಜು ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. ಈ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.
ಪೋಷಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ತನಿಖೆ ಆರಂಭವಾಗಿದೆ, 22 ವರ್ಷದ ಪ್ರೀತಿ ಫ್ಯಾನ್‌ಗೆ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕ್ಲಾಸ್‌ಗೆ ತೆರಳದೇ ಪ್ರೀತಿ ಹಾಸ್ಟೆಲ್‌ನಲ್ಲಿಯೇ ಇದ್ದರು. ವಾರ್ಡನ್ ಈ ಬಗ್ಗೆ ವಿಚಾರಿಸಿದಾಗ ಹುಷಾರಿಲ್ಲ ಹಾಗಾಗಿ ಕ್ಲಾಸ್‌ಗೆ ಹೋಗೋದಿಲ್ಲ ಎಂದು ಹೇಳಿದ್ದಾಳೆ.
ಆಕೆಯ ಸ್ನೇಹಿತೆ ಹುಷಾರಿಲ್ಲದ ಪ್ರೀತಿಯನ್ನು ನೋಡಲು ಹೋದಾಗ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡಿದ್ದು, ತಕ್ಷಣ ವಾರ್ಡನ್‌ಗೆ ಮಾಹಿತಿ ನೀಡಲಾಗಿದೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟರೊಳಗಾಗಲೇ ಆಕೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.