June 29, 2026
Monday, June 29, 2026
spot_img

ಪತಿಯ ಅನುಮಾನಾಸ್ಪದ ಸಾ*ವು: ಹೃದಯಾಘಾತದ ಕಥೆ ಕಟ್ಟಿದ ಪತ್ನಿ ಅಂದರ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದ ವ್ಯಕ್ತಿಯ ಸಾವಿನ ಹಿಂದೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಮೃತನ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹೃದಯಾಘಾತ ಎಂದು ಹೇಳಿದ ಪತ್ನಿ

ಮೃತ ನಿತ್ಯಾನಂದ (50) ಖಾಸಗಿ ವಾಹನ ಶೋರೂಂನಲ್ಲಿ ವ್ಯವಸ್ಥಾಪಕರಾಗಿದ್ದರು. ಅವರ ಪತ್ನಿ ಸುಶೀಲ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದಾರೆ. ಪತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪತ್ನಿ ನೆರೆಹೊರೆಯವರಿಗೆ ಮಾಹಿತಿ ನೀಡಿದ್ದಳು.

ಕುತ್ತಿಗೆಯ ಗಾಯದಿಂದ ಬಯಲಾಯ್ತು ಅನುಮಾನ

ಅಂತಿಮ ದರ್ಶನಕ್ಕೆ ಬಂದಿದ್ದ ನಿತ್ಯಾನಂದ ಅವರ ಸಹೋದರ, ಕುತ್ತಿಗೆಯಲ್ಲಿದ್ದ ಗಾಯದ ಗುರುತನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದರು.

ಪ್ರಾಥಮಿಕ ತನಿಖೆಯಲ್ಲಿ ಮದ್ಯದ ಅಮಲಿನಲ್ಲಿ ಮಲಗಿದ್ದ ವೇಳೆ ಸೀರೆಯಿಂದ ಕತ್ತು ಬಿಗಿದಿರುವ ಶಂಕೆ ವ್ಯಕ್ತವಾಗಿದೆ. ವಿಚಾರಣೆ ವೇಳೆ ಸುಶೀಲ ತಪ್ಪೊಪ್ಪಿಕೊಂಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಆದರೆ ಕೊಲೆಗೆ ನಿಖರ ಕಾರಣವೇನು ಎಂಬುದರ ಕುರಿತು ಕುವೆಂಪುನಗರ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !