CRIME NEWS | ತಾಯಿ-ಮಕ್ಕಳ ಸಂಶಯಾಸ್ಪದ ಸಾವು

ಹೊಸದಿಗಂತ ವರದಿ ಬೀದರ್ :

ತಾಯಿ ಮತ್ತು ಮಕ್ಕಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೀದರ್‌ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮನಳ್ಳಿ ತಾಂಡಾದಲ್ಲಿ ತಾಯಿ ಮಿರಾಬಾ ಯಿ ದಯಾನಂದ (25) ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಅದೇ ಕೋಣೆಯಲ್ಲಿ ೪ ಮತ್ತು 2.5 ವರ್ಷದ ಮಕ್ಕಳ ಮೃತದೇಹ ಪತ್ತೆಯಾಗಿದೆ.

ಮಿರಾಬಾಯಿ ಕುಟುಂಬಸ್ಥರಿಂದ ಮೂವರ ಕೊಲೆ ಆರೋಪ ಕೇಳಿ ಬಂದಿದ್ದು ಇಬ್ಬರು ಚಿಕ್ಕ ಮಕ್ಕಳನ್ನು ವಿಷ ಕುಡಿಸಿ ಸಾಯಿಸಿರುವ ಶಂಕೆ ವ್ಯಕ್ತವಾಗಿದೆ. ಇನ್ನೊಂದೆಡೆ ಮೃತಪಟ್ಟ ಗೃಹಿಣಿ ಮೀರಾಬಾಯಿ ಪತಿ ಹಾಗೂ ಕುಟುಂಬದ ಸದಸ್ಯರು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಪೋಲಿಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು ಪರಾರಿಯಾದವರ ಬಂಧನಕ್ಕೆ ಜಾಲ ಬೀಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!