ವಿದೇಶಿ ಮೂಲದ ಮಹಿಳೆ ಅನುಮಾನಸ್ಪದ ಸಾವು: ಹೋಟೆಲ್ ರೂಮ್ ನಲ್ಲಿ ಮೃತದೇಹ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ವಿದೇಶಿ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರು ಉಜ್ಬೇಕಿಸ್ತಾನ್ ಮೂಲದ ಜರೀನಾ ಎಂಬ ವಿದೇಶಿ ಮಹಿಳೆ ಎಂದು ತಿಳಿದುಬಂದಿದೆ.

ನಾಲ್ಕು ದಿನಗಳ ಹಿಂದೆ ನಗರಕ್ಕೆ ಬಂದಿದ್ದ ವಿದೇಶಿ ಮಹಿಳೆ ಬಿಡಿಎ ಸೇತುವೆ ಬಳಿಯ ಖಾಸಗಿ ಸ್ಟಾರ್ ಹೋಟೆಲ್ ನ ಎರಡನೇ ಮಹಡಿಯ ಕೊಠಡಿಯಲ್ಲಿ ಮೃತಪಟ್ಟಿದ್ದಾರೆ. ಮೃತ ಜರೀನಾ ಪ್ರವಾಸಿ ವೀಸಾದಲ್ಲಿ ಬೆಂಗಳೂರಿಗೆ ಬಂದಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿ ಹೋಟೆಲ್ ಸಿಬ್ಬಂದಿ ಎಷ್ಟೇ ಕೂಗಾಡಿದರೂ ಮಹಿಳೆ ಬಂದಿರಲಿಲ್ಲ. ಅನುಮಾನಗೊಂಡ ಸಿಬ್ಬಂದಿ ಮಧ್ಯರಾತ್ರಿ ಮಾಸ್ಟರ್ ಕೀ ಬಳಸಿ ಬಾಗಿಲು ತೆರೆದಾಗ ಮಹಿಳೆ ಶವವಾಗಿ ಪತ್ತೆಯಾಗಿದ್ದಾಳೆ.

ಮಹಿಳೆಯ ದೇಹವು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಶೇಷಾದ್ರಿಪುರಂ ಪೊಲೀಸರು, ಎಫ್‌ಎಸ್‌ಎಲ್‌ ತಂಡ ಹಾಗೂ ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಸಿಎಆರ್​ಡಿಸಿಪಿ ಅರುಣಾಂಶು, ಕೇಂದ್ರ ಜಿಲ್ಲಾ ಡಿಸಿಪಿ ಶೇಖರ್ ಟೆಕ್ಕಣ್ಣನವರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!