Wednesday, October 22, 2025

ಪಿಜಿಯಲ್ಲಿ ಯುವತಿ ಅನುಮಾನಾಸ್ಪದ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಿಜಿಯೊಂದರಲ್ಲಿ ಯುವತಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಸಾವಿಗೀಡಾದ ವಿದ್ಯಾರ್ಥಿನಿಯನ್ನು ಸೀಮಾ ರಾಠೋಡ (17) ಎಂದು ಗುರುತಿಸಲಾಗಿದೆ. ನಗರದ ಪಿಯು ಕಾಲೇಜೊಂದರಲ್ಲಿ ಪ್ರಥಮ ವರ್ಷದ ಪಿಯುಸಿ ಓದುತ್ತಿದ್ದಳು. ಪಿಜಿಯಲ್ಲಿ ಕೆಲವು ವಿದ್ಯಾರ್ಥಿನಿಯರು ರೂಮ್ ಒಳಗೆ ಹೋಗುತ್ತಿದ್ದಂತೆ ಯುವತಿಯ ಮೃತದೇಹ ಸ್ಲ್ಯಾಬ್‍ನ ಹುಕ್‍ನಲ್ಲಿ ನೇತಾಡುತ್ತಿರುವುದನ್ನು ಕಂಡು ಕಿರುಚಾಡುತ್ತ ಹೊರಗೆ ಓಡಿ ಬಂದಿದ್ದಾರೆ.

ಯುವತಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೋಷಕರು, ನಮಗೆ ಕರೆ ಮಾಡಿ ಪಿಟ್ಸ್ ಬಂದಿದೆ ಎಂದಿದ್ದರು. ಈಗ ನೇಣು ಹಾಕಿಕೊಂಡಿದ್ದಾಳೆ ಎನ್ನುತ್ತಿದ್ದಾರೆ ಎಂದು ಪಿಜಿ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದೆ.

error: Content is protected !!