ಹೊಸದಿಗಂತ ವರದಿ ಮಳವಳ್ಳಿ:
ಮಳವಳ್ಳಿಯಲ್ಲಿ ಮಂಗಳವಾರದಿಂದ ಸುತ್ತೂರು ಆದಿಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮ ಆರಂಭವಾಗಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಲು ಪಟ್ಟಣದ ಹೊರವಲಯದ ಮಾರೇಹಳ್ಳಿ ಬಳಿ ನಿರ್ಮಿಸಿರುವ ಹೆಲಿಪ್ಯಾಡ್‌ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಧ್ಯಾಹ್ನ 3:20ಕ್ಕೆ ಆಗಮಿಸಿದಾಗ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹಾಜರಿದ್ದರು. ಮಧ್ಯಾಹ್ನ 3:20ಕ್ಕೆ ವೇದಿಕೆಗೆ ಆಗಮಿಸುವ ಮುನ್ನ ವೇದಿಕೆ ಬಳಿ ನಿರ್ಮಿಸಿದ್ದ ಸುತ್ತೂರು ಆದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು. ನಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು
ಸುತ್ತೂರು ಆದಿಜಗದ್ಗುರು ಶಿವಯೋಗಿಗಳ ಜಯಂತಿ ಮಹೋತ್ಸವಕ್ಕೆ ಚಾಲನೆ

