August 12, 2026
Wednesday, August 12, 2026
spot_img

ಚಲಿಸುತ್ತಿದ್ದ ಟ್ರಕ್‌ಗೆ ಎಸ್‌ಯುವಿ ಕಾರು ಡಿಕ್ಕಿ: ಒಂದೇ ಕುಟುಂಬದ ಐವರ ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಧ್ಯಪ್ರದೇಶದ ಮೈಹಾರ್‌ ಜಿಲ್ಲೆಯಲ್ಲಿ ಇಂದು ಬೆಳಗಿನ ಜಾವ ಭೀಕರ ಅಪಘಾತವೊಂದು ಸಂಭವಿಸಿದೆ. ಚಲಿಸುತ್ತಿದ್ದ ಟ್ರಕ್‌ಗೆ ಎಸ್‌ಯುವಿ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದ್ದು ಒಂದೇ ಕುಟುಂಬದ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತರನ್ನು ಅಂಕುರ್ ಪಟೇಲ್ (40), ಮೃದುಲ್ ಪಟೇಲ್ (32), ವಿಜಯ್ ಪಟೇಲ್ (30), ಹರಿಶಂಕರ್ ಪಟೇಲ್ (25) ಮತ್ತು ಶಿವ ಪಟೇಲ್ (23) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸ್ಥಳೀಯ ಕಾಂಗ್ರೆಸ್ ನಾಯಕ ಮನೀಶ್ ಪಟೇಲ್ ಅವರ ಸಹೋದರರು ಎಂದು ತಿಳಿದುಬಂದಿದೆ.

ಮೈಹಾರ್ ಜಿಲ್ಲೆಯ ದೇಹತ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-30 ರ ರಿಗ್ರಾ ಗ್ರಾಮದ ಬಳಿ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ. ಮೃತರಾದವರೆಲ್ಲರೂ ಅಮರಪಟನ್‌ನಲ್ಲಿ ನಡೆದ ಸೋದರ ಸಂಬಂಧಿ ಮನೋಜ್ ಪಟೇಲ್ ಅವರ ಹುಟ್ಟುಹಬ್ಬದ ಆಚರಣೆಯಲ್ಲಿ ಭಾಗವಹಿಸಿ ಮೈಹಾರ್‌ಗೆ ಹಿಂತಿರುಗುತ್ತಿದ್ದರು.

ಅತಿ ವೇಗವಾಗಿ ಬಂದ ಕಾರು ಮುಂಭಾಗದಲ್ಲಿದ್ದ ಟ್ರಕ್‌ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗಿದ್ದ ಆರೂ ಜನರು ಟ್ರಕ್‌ನ ಹಿಂಭಾಗದಲ್ಲಿ ಸಿಲುಕಿಕೊಂಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !