May 9, 2026
Saturday, May 9, 2026
spot_img

ಮಮತಾ ಕೋಟೆಯಲ್ಲಿ ಸುವೇಂದು ಸಾರಥ್ಯ: ಬ್ರಿಗೇಡ್ ಪೆರೇಡ್‌ನಲ್ಲಿ ‘ಮೋದಿ’ ಜಯಘೋಷ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆಯುವ ದಿನ. ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಭಾರತೀಯ ಜನತಾ ಪಕ್ಷದ ಮೊದಲ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದು, ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಜಯಗಳಿಸಿದ ನಂತರ, ಇಂದು ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೇರುತ್ತಿದೆ. ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರು ಪದಗ್ರಹಣ ಮಾಡುತ್ತಿದ್ದು, ಈ ಸಂಭ್ರಮಕ್ಕೆ ಸಾಕ್ಷಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಕೋಲ್ಕತ್ತಾಕ್ಕೆ ಆಗಮಿಸಿದ್ದಾರೆ.

ಪ್ರಧಾನಿ ಮೋದಿ ಅವರು ಬ್ರಿಗೇಡ್ ಪೆರೇಡ್ ಮೈದಾನಕ್ಕೆ ಆಗಮಿಸುತ್ತಿದ್ದಂತೆ ನೆರೆದಿದ್ದ ಲಕ್ಷಾಂತರ ಅಭಿಮಾನಿಗಳು ಮತ್ತು ಕಾರ್ಯಕರ್ತರು “ಮೋದಿ, ಮೋದಿ” ಎಂಬ ಘೋಷಣೆಗಳೊಂದಿಗೆ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಇಡೀ ಮೈದಾನ ಕೇಸರಿಮಯವಾಗಿದ್ದು, ಜನಸಾಗರವೇ ಹರಿದುಬಂದಿದೆ.

ನಂದಿಗ್ರಾಮ ಮತ್ತು ಭವಾನಿಪುರ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಆಡಳಿತಕ್ಕೆ ಅಂತ್ಯ ಹಾಡಿದ ಸುವೇಂದು ಅಧಿಕಾರಿ ಅವರು ಇಂದು ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಾಜ್ಯದಲ್ಲಿ ‘ಡಬಲ್ ಎಂಜಿನ್’ ಸರ್ಕಾರದ ವೇಗವರ್ಧನೆಗೆ ಈ ಮೂಲಕ ಚಾಲನೆ ಸಿಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !