ಡಿ.5ರಂದು ಹಾಸನದಲ್ಲಿ ಸ್ವಾಭಿಮಾನಿ ಸಮಾವೇಶ: ಡಿ.ಕೆ ಶಿವಕುಮಾರ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡಿಸೆಂಬರ್.5ರಂದು ಹಾಸನದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ವಾಭಿಮಾನಿ ಸಮಾವೇಶವನ್ನು ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದರು.

ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ರಾಜ್ಯದಲ್ಲಿ ಪ್ರತಿ ವಿಭಾಗವಾರು ಸಮಾವೇಶ ಮಾಡಲು ತೀರ್ಮಾನಿಸಲಾಗಿದೆ. ಎಲ್ಲೆಲ್ಲಿ ಕಳೆದುಕೊಂಡಿದ್ದೇವೋ ಅಲ್ಲಲ್ಲೇ ಹುಡುಕುವ ಕೆಲಸ ಮಾಡಲಿದ್ದೇವೆ. ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಕೂಡ ಬರಲಿದೆ ಎಂದರು.

ಶಿಗ್ಗಾಂವಿ, ಸಂಡೂರು ಕ್ಷೇತ್ರದಲ್ಲಿ ಜನತೆಗೆ ಕೃತಜ್ಞತೆ ಸಲ್ಲಿಸಲು ಸಮಾವೇಶ ಮಾಡುತ್ತೇವೆ. ದೇಶದಲ್ಲಿ ಆಗುತ್ತಿರುವ ವಿಷಯಗಳ ಮೇಲೆ ಸಮಾವೇಶ ಮಾಡುತ್ತೇವೆ. ಸಮಾವೇಶಕ್ಕೆ ಪಕ್ಷದ ಎಲ್ಲಾ ನಾಯಕರಿಗೆ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.

ಯಾವುದೇ ಗೊಂದಲವಿಲ್ಲ, ಪಕ್ಷದ ಅಡಿಯಲ್ಲಿ ಹಾಸನ ಸಮಾವೇಶ ನಡೆಯಲಿದೆ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಸಿಎಂ, ಸಮ್ಮಿಶ್ರ ಸರ್ಕಾರದ ಸಿಎಂ ಅಲ್ಲ. ಕೆಲವರು ವೈಯಕ್ತಿಕವಾಗಿ ಮಾತಾಡಬಹುದು, ಒಂದೇ ಪಕ್ಷ, ಒಂದೇ ಚಿಹ್ನೆ ಸಮಾವೇಶದ ಬಗ್ಗೆ ಎಐಸಿಸಿ ನಾಯಕರ ಜೊತೆಗೂ ಸಹ ಮಾತನಾಡಿದ್ದೇವೆ. ಜನರ ಹಿತಕ್ಕಾಗಿ ಈ ಕಾರ್ಯಕ್ರಮ ಮಾಡುತ್ತಿದ್ದೇವೆ. ಸರ್ಕಾರದ ಬಗ್ಗೆ ಸುಳ್ಳು ಆರೋಪ ಮಾಡಿದ್ದಕ್ಕೆ ಜನ ಉತ್ತರ ಕೊಟ್ಟಿದ್ದಾರೆ. ನನ್ನ ನೇತೃತ್ವದಲ್ಲೇ ಹಾಸನ ಸಮಾವೇಶ ಮಾಡ್ತಿದ್ದೇನೆ. ಎಲ್ಲಾ ಜಿಲ್ಲೆಗಳಲ್ಲೂ ಇದೇ ರೀತಿಯ ಕಾರ್ಯಕ್ರಮ ಮಾಡಲಿದ್ದೇನೆ. ಇದಕ್ಕೆ ಎಐಸಿಸಿ ನಾಯಕರು ಸೂಚನೆ ಕೊಟ್ಟಿದ್ದಾರೆ. ಕಾಂಗ್ರೆಸ್ ಯಾವಾಗಲೂ ಒಂದೇ ಪಾರ್ಟಿ, ಸಿಎಂ ಜತೆ ಮಾತಾಡಿದ್ದೇನೆ ಎಂದು ಕಡ್ಡಿ ಮುರಿದಂತೆ ಹೇಳಿದರು.

ಡಿಸೆಂಬರ್.5ರಂದು ಹಾಸನದ ಸ್ವಾಭಿಮಾನಿ ಸಮಾವೇಶದ ಬಳಿಕ ಎಲ್ಲಾ ಜಿಲ್ಲೆಗಳಲ್ಲಿ ಇದೇ ರೀತಿಯ ಕಾರ್ಯಕ್ರಮ ಮಾಡಲಿದ್ದೇವೆ. ಇದಕ್ಕೆ ಎಐಸಿಸಿ ನಾಯಕರು ಸೂಚನೆ ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಯಾವುದೇ ಪಾರ್ಟಿ ಇಲ್ಲ. ಎಲ್ಲರು ಜೊತೆಗೂಡಿ ಸಮಾವೇಶ ಮಾಡುತ್ತಿರುವುದಾಗಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!