Saturday, December 9, 2023

Latest Posts

ದೇಶದೆಲ್ಲೆಡೆ ʻಸ್ವಚ್ಛತಾ ಹಿ ಸೇವಾʼ ಅಭಿಯಾನ, ಸಾಮಾನ್ಯರಿಂದ ಹಿಡಿದು ರಾಜಕೀಯ ಗಣ್ಯರವರೆಗೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನಿ ಮೋದಿಯವರು ಕರೆಕೊಟ್ಟಿರುವ ಸ್ವಚ್ಛತಾ ಹಿ ಸೇವಾ ಅಭಯಾನಕ್ಕೆ ದೇಶದೆಲ್ಲೆಡೆ ಅಭುತಪೂರ್ವ ಸ್ಪಂದನೆ ದೊರೆತಿದೆ. ಜನ ಸಮಾನ್ಯರಿಂದ ಹಿಡಿದು ರಾಜಕೀಯ ಗಣ್ಯರವರೆಗೆ ಎಲ್ಲರೂ ಶ್ರಮದಾನ ಕಾರ್ಯದಲ್ಲಿ ಪಾಲ್ಗೊಂಡರು.

ಮಹಾತ್ಮ ಗಾಂಧಿಜೀಯವರಿಗೆ ಗೌರವ ಸೂಚಿಸುವ ಸಲುವಾಗಿ ಇಂದು ದೇಶಾದ್ಯಂತ ಜನ ಒಂದು ಗಂಟೆ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮೋದಿ ತಮ್ಮ 105ನೇ ಮನ್‌ ಕಿ ಬಾತ್‌ ಸಂಚಿಕೆಯಲ್ಲಿ ಮನವಿ ಮಾಡಿದ್ದರು. ಅದರಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಶ್ರಮದಾನ ಕಾರ್ಯದಲ್ಲಿ ಭಾಗಿಯಾಗಿ ಅಭಿಯಾನವನ್ನು ಯಶಸ್ವಿಗೊಳಿಸಿದರು.

ದೆಹಲಿಯ ಸಫ್ದರ್‌ಜಂಗ್ ರೈಲು ನಿಲ್ದಾಣದಲ್ಲಿ ‘ಸ್ವಚ್ಛತಾ ಹಿ ಸೇವಾ’ ಅಭಿಯಾನದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಭಾಗವಹಿಸಿದರು. ರೈಲೆ ಹಳಿ ಮೇಲೆ ಬಿದ್ದಿದ್ದ ಪ್ಲಾಸ್ಟಿಕ್‌, ಇನ್ನಿತರ ವಸ್ತುಗಳನ್ನು ಆಯ್ದ ಕಸದ ಬುಟ್ಟಿಗೆ ಹಾಕಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕೂಡ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು. “ಪ್ರಧಾನಿ ಮೋದಿ ಅವರ ಕರೆಯಂತೆ ಪ್ರಭಾತ್ ಲೋಧಾ ಅವರ ನೇತೃತ್ವದಲ್ಲಿ, ನಮ್ಮ ಐಟಿಐ ವಿದ್ಯಾರ್ಥಿಗಳು ಮತ್ತು ಕೆಲವು ಎನ್‌ಜಿಒಗಳು ಸೇರಿ ಸುಮಾರು 350ಕೋಟೆಗಳನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕ ಮಹೋತ್ಸವಕ್ಕೆ 350 ವರ್ಷಗಳಾಗಿವೆ, ಅದಕ್ಕಾಗಿಯೇ ನಾವು ರಾಜ್ಯದಲ್ಲಿರುವ 350 ಕೋಟೆಗಳನ್ನು ಸ್ವಚ್ಛಗೊಳಿಸಲು ಮತ್ತು ಸಂರಕ್ಷಿಸಲು ಪ್ರಯತ್ನಿಸುತ್ತಿದ್ದೇವೆ ಎಂದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸೀತಾಪುರದಲ್ಲಿ ‘ಸ್ವಚ್ಛತಾ ಹಿ ಸೇವಾ’ ಅಭಿಯಾನದಲ್ಲಿ ಭಾಗವಹಿಸಿದರು. ಹಾಗೆಯೇ ಹರಿಯಾಣದ ಗುರುಗ್ರಾಮ್‌ನಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಕೂಡ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!