ಹೊಸದಿಗಂತ ವರದಿ ಕಲಬುರಗಿ:
ಮಹಾತ್ಮಾ ಗಾಂಧೀಜಿ ಜಯಂತಿ ಅಂಗವಾಗಿ ಪ್ರಧಾನಿ ಮೋದಿಯವರು ಕರೆ ನೀಡಿರುವ ಸ್ವಚ್ಛತಾ ಹಿ ಸೇವಾ ಅಭಿಯಾನದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಭಾಗಿಯಾದರು. ಮಹಾನಗರ ಪಾಲಿಕೆ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಡಿಸಿ ಫೌಜಿಯಾ ತರನ್ನುಮ್ ಅವರಿಂದ ಭಾನುವಾರ ಬೆಳಿಗ್ಗೆ ಸ್ವಚ್ಛತಾ ಡ್ರೈವ್ ಕಾರ್ಯಕ್ರಮ ಜರುಗಿತು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಎರಡು ಗಂಟೆಗಳ ಕಾಲ ಕಸ ಗುಡಿಸುವ ಮೂಲಕ ಸ್ವಚ್ಛ ಭಾರತ್ ಅಭಿಯಾನ ಕೈಗೊಂಡರು.
ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರಿಗೆ ಎಡಿಸಿ ಸೇರಿದಂತೆ ಇತರೆ ಅಧಿಕಾರಿಗಳು ಸಾಥ್ ನೀಡಿದರು.