ವಿವೇಕಾನಂದರು ಯುವಜನರಿಗೆ ಸ್ಫೂರ್ತಿ: ವಿವೇಕಾನಂದ ಜಯಂತಿಯಂದು ರವಿಕುಮಾರ್‌ ಮಾತು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜ್ಞಾನದ ಬೆಳಕನ್ನು ಪಸರಿಸಲು ಭೂಮಿಗೆ ಬಂದ ಅಮೂಲ್ಯವಾದ ಮುತ್ತು, ದೇಶ ಕಂಡ ಅಪ್ರತಿಮ ನಾಯಕ, ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಇಂದು (ಜನವರಿ 12) ಬಿಜೆಪಿ ರಾಜ್ಯ ಕಾರ್ಯಾಲಯ ಮಲ್ಲೇಶ್ವರದಲ್ಲಿರುವ ಜಗನ್ನಾಥ ಭವನದಲ್ಲಿ ಆಚರಿಸಲಾಯಿತು. ಈ ವೇಳೆ, ಸ್ವಾಮಿ ವಿವೇಕಾನಂದರು ಯುವಜನರಿಗೆ ಸ್ಫೂರ್ತಿ ನೀಡುವ ಮಹಾನ್ ಚೇತನ. ಅವರ ಜೀವನಾದರ್ಶಗಳನ್ನು ಅಳವಡಿಸಿಕೊಂಡು ಭಾರತವನ್ನು ವಿಶ್ವಗುರುವನ್ನಾಗಿ ಮಾಡಲು ನಮ್ಮ ಆದರಣೀಯ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು ಶ್ರಮಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ತಿಳಿಸಿದರು.

ವಿವೇಕಾನಂದರ ಜಯಂತಿ ಅಂಗವಾಗಿ ದೇಶದಾದ್ಯಂತ ಯುವಜನೋತ್ಸವಗಳನ್ನು ಸಂಘಟಿಸಲಾಗುತ್ತಿದೆ. ವಿವೇಕಾನಂದ ಅವರು ತಮ್ಮ 39 ವರ್ಷಗಳ ಜೀವನದಲ್ಲಿ ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿದವರು. ಆಧ್ಯಾತ್ಮಿಕ ಮಾರ್ಗದರ್ಶನ ನೀಡಿದ್ದ ಅವರು ದೇಶಕ್ಕೆ ಮಹಾನ್ ಕೊಡುಗೆ ನೀಡಿದ್ದಾರೆ. ನಾವೆಲ್ಲರೂ ಅವರ ಜೀವನ, ಆದರ್ಶಗಳನ್ನು ಪಾಲಿಸಬೇಕು ಎಂದು ಆಶಿಸಿದರು.

ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕೇಶ್ ಗೌಡ, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಕಾರ್ಯಾಲಯದ ಸಿಬ್ಬಂದಿ ಭಾಗವಹಿಸಿದ್ದರು. ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಸ್ವಾಮಿ ವಿವೇಕಾನಂದರ ಜೀವನ- ಸಾಧನೆ ಕುರಿತು ಮಾಹಿತಿ ಕೊಡಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!