ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಲ್ಲರೂ ಸಿಎಂ ಆಗಿದ್ದಾರೆ ಡಿಕೆ. ಶಿವಕುಮಾರ್ ಸಿಎಂ ಆಗಬೇಕು ಎಂದು ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಸಿದ್ದರಾಮಯ್ಯ ಎದುರೇ ಹೇಳಿದ್ದು, ಸಿಎಂ ಇದಕ್ಕೆ ಉತ್ತರ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಏನೂ ಮಾತನಾಡದ ಸಿಎಂ ಸಿದ್ದರಾಮಯ್ಯ ನಂತರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.
ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಸ್ವಾಮೀಜಿಯವರಲ್ಲ ಎಂದು ಹೇಳಿ ಗರಂ ಆಗಿದ್ದಾರೆ.
ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯ. ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಅನುಭವ ಹೊಂದಿದ್ದಾರೆ. ನಮ್ಮ ಸಮುದಾಯದ ಡಿ.ಕೆ ಶಿವಕುಮಾರ್ ಅವರಿಗೆ ಮುಂದೆ ಅವಕಾಶ ಮಾಡಿಕೊಡಲಿ ಎಂದು ಸ್ವಾಮೀಜಿ ಕಾರ್ಯಕ್ರಮದಲ್ಲಿ ಹೇಳಿದ್ದರು.