Friday, January 2, 2026

ಪ್ರತಿಭಟನೆ ತಡೆಯಲು ಮುಂದಾದ ಪಿಎಸ್‌ಐ, ಸಿಬ್ಬಂದಿಗೆ ಸ್ವಾಮೀಜಿಯಿಂದ ಕಪಾಳಮೋಕ್ಷ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗುತ್ತಿರುವ ಮೆಡಿಕಲ್ ಕಾಲೇಜಿಗೆ ವಿರೋಧಿಸಿ ಕಳೆದ ನಾಲ್ಕೈದು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು ಇಂದು ಪ್ರತಿಭಟನೆಯಲ್ಲಿ ಸ್ವಾಮೀಜಿಗಳು ಪಾಲ್ಗೊಂಡಿದ್ದಾರೆ.

ಇದೇ ವೇಳೆ ಪ್ರತಿಭಟನಾಕಾರರು ಸಚಿವ ಎಂ.ಬಿ.ಪಾಟೀಲ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಪ್ರತಿಭಟನನಿರತರನ್ನು ಸೊಲ್ಲಾಪುರ ರಸ್ತೆಯಲ್ಲಿ ಪೊಲೀಸರು ತಡೆದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ನೂಕಾಟ ತಳ್ಳಾಟ ನಡೆದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಗನಬಸವ ಸ್ವಾಮೀಜಿ ಸಿಟ್ಟಿಗೆದ್ದು ಏಕಾಏಕಿ ಪಿಎಸ್ ಐ ಲಮಾಣಿ ಹಾಗೂ ಮತ್ತೋರ್ವ ಪೊಲೀಸ್ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ಘಟನೆ ನಂತರ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

error: Content is protected !!