ಪದಕ ಗೆದ್ದು ತವರಿಗೆ ಮರಳಿದ ಸ್ವಪ್ನಿಲ್​ ಕುಸಾಲೆಗೆ ಸಿಕ್ಕಿತು ಅದ್ದೂರಿ ಸ್ವಾಗತ

ಹೊಸದಿಗಂತ ಡಿಜಿಟಲ್ ಡೆಸ್ಕ್;

ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಪುರುಷರ 50 ಮೀ. ರೈಫಲ್​ 3 ಪೊಸಿಷನ್​ ಶೂಟಿಂಗ್​ನಲ್ಲಿ ಕಂಚಿನ ಪದಕ ಗೆದ್ದ ಮಹಾರಾಷ್ಟ್ರದ 28 ವರ್ಷದ ಸ್ವಪ್ನಿಲ್​ ಕುಸಾಲೆ ಅವರು ಇಂದು(ಗುರುವಾರ) ತವರಿಗೆ ಮರಳಿದ್ದಾರೆ.

ಮುಂಬಯಿ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ಹಾರ ಮತ್ತು ಗುಲಾಬಿ ದಳಗಳ ಅಭಿಷೇಕದೊಂದಿಗೆ ಕ್ರೀಡಾಪ್ರೇಮಿಗಳು ಭರ್ಜರಿಯಾಗಿ ಸ್ವಾಗತ ಕೋರಿದರು. ತೆರೆದ ಕಾರಿನ ಮೂಲಕ ಮೆರವಣಿಗೆ ಮಾಡಿ ಸಂಭ್ರಮಿಸಲಾಯಿತು.

ಕೊಲ್ಹಾಪುರ ಜಿಲ್ಲೆಯ ಕಂಬಲ ವಾಡಿಯವರಾದ ಸ್ವಪ್ನಿಲ್​ಗೆ ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ1 ಕೋಟಿ ಬಹುಮಾನ ಪ್ರಕಟಿಸಿದ್ದಾರೆ.

ಕಂಚಿನ ಪದಕ ಗೆಲ್ಲುವ ಮೂಲಕ ಸ್ವಪ್ನಿಲ್ ಒಲಿಂಪಿಕ್ಸ್​ನಲ್ಲಿ ಪುರುಷರ 50 ಮೀ. ರೈಫಲ್​ 3 ಪೊಸಿಷನ್​ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಹಾಗೂ 3ನೇ ರೈಫಲ್​ ಶೂಟರ್​ ಎಂಬ ಇತಿಹಾಸ ನಿರ್ಮಿಸಿದ್ದರು. ಫೈನಲ್​ ಸ್ಪರ್ಧೆಯಲ್ಲಿ ಅವರು ಒಟ್ಟು 451.4 ಅಂಕ ಗಳಿಸುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು. ಸ್ವಪ್ನಿಲ್​ ಕುಸಾಲೆಗೆ ಮಹರಾಷ್ಟ್ರ ಸರ್ಕಾರದ ಬಹುಮಾನ ಮೊತ್ತದ ಹೊರತಾಗಿಯೂ ಕೇಂದ್ರ ಸರ್ಕಾರದಿಂದ 30 ಲಕ್ಷ ರೂ. ಮತ್ತು ಭಾರತೀಯ ಒಲಿಂಪಿಕ್ಸ್​ ಸಂಸ್ಥೆಯಿಂದ 50 ಲಕ್ಷ ರೂ. ಬಹುಮಾನ ಸಿಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!