Paris Olympics 2024 | ಭಾರತಕ್ಕೆ ಬಂದೇ ಬಿಡ್ತು ಮತ್ತೊಂದು ಮೆಡಲ್‌, ಮೂರನೇ ಪದಕ ಗೆದ್ದು ಕೊಟ್ಟ ಸ್ವಪ್ನಿಲ್ ಕುಸಾಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತಕ್ಕೆ ಬಂದೇ ಬಿಡ್ತು ಮತ್ತೊಂದು ಮೆಡಲ್‌, ಮೂರನೇ ಪದಕ ಗೆದ್ದು ಕೊಟ್ಟ ಸ್ವಪ್ನಿಲ್ ಕುಸಾಲೆ..

ಪುರುಷರ 50 ಮೀ ರೈಫಲ್ 3 ಸುತ್ತಿನಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. 8 ಮಂದಿ ಒಳಗೊಂಡಿದ್ದ ಫೈನಲ್ ಸುತ್ತಿನಲ್ಲಿ ಒಟ್ಟು 451.4 ಅಂಕಗಳನ್ನು ಕಲೆಹಾಕುವ ಮೂಲಕ ಭಾರತೀಯ ಶೂಟರ್ ಮೂರನೇ ಸ್ಥಾನ ಪಡೆದಿದ್ದಾರೆ. ಈ ಮೂಲಕ ಭಾರತಕ್ಕೆ ಮೂರನೇ ಕಂಚಿನ ಪದಕ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಚೀನಾದ ಲಿಯು ಯುಕುನ್ 463.6 ಅಂಕಗಳೊಂದಿಗೆ ಚಿನ್ನದ ಪದಕ ಗೆದ್ದುಕೊಂಡರೆ, ಉಕ್ರೇನ್ ಸೆರ್ಹಿ ಕುಲಿಶ್ 461.3 ಪಾಯಿಂಟ್ಸ್​ನೊಂದಿಗೆ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು. ಇನ್ನು 7ನೇ ಸ್ಥಾನದೊಂದಿಗೆ ಫೈನಲ್​ಗೆ ಪ್ರವೇಶಿಸಿದ್ದ ಸ್ವಪ್ನಿಲ್ ಕುಸಾಲೆ ಅಂತಿಮ ಸುತ್ತಿನಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿದರು.

ಅಲ್ಲದೆ ಜೆಕ್ ರಿಪಬ್ಲಿಕ್​ನ ಶೂಟರ್​ ಜಿರಿ ಪ್ರೀವ್ರಾಟ್ಸ್ಕಿ ಅವರನ್ನು ಹಿಂದಿಕ್ಕಿ ಸ್ವಪ್ನಿಲ್ ಕುಸಾಲೆ ಮೂರನೇ ಸ್ಥಾನಕ್ಕೇರಿರು. ಈ ಮೂಲಕ ಒಟ್ಟು 451.4 ಅಂಕಗಳನ್ನು ಕಲೆಹಾಕುವ ಮೂಲಕ ಭಾರತೀಯ ಶೂಟರ್ ಚೊಚ್ಚಲ ಒಲಿಂಪಿಕ್ಸ್ ಪದಕ ಗೆಲ್ಲುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ  ಭಾರತದ ಪದಕಗಳ ಸಂಖ್ಯೆ ಮೂರಕ್ಕೇರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!