ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ (Bibhav Kumar)ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿಯ ತೀಸ್ ಹಜಾರಿ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ಮೇ 13 ರಂದು ಕೇಜ್ರಿವಾಲ್ ಅವರ ನಿವಾಸದಲ್ಲಿ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪ ಬಿಭವ್ ಕುಮಾರ್ ಮೇಲಿದ್ದು, ಸ್ವಾತಿ ಮಲಿವಾಲ್ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಜಾಮೀನು ವಿಚಾರಣೆ ವೇಳೆ ಬಿಭವ್ ಕುಮಾರ್ ಪರ ವಾದಿಸಿದ ವಕೀಲರು ಆಮ್ ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಲಿವಾಲ್ ಈ ಆರೋಪಕ್ಕಾಗಿ ದೆಹಲಿ ಮುಖ್ಯಮಂತ್ರಿಯವರ ನಿವಾಸದಲ್ಲಿ ಸಿಸಿಟಿವಿ ಇಲ್ಲದ ಜಾಗವನ್ನೇ ಆಯ್ಕೆ ಮಾಡಿಕೊಂಡರು. ಅಲ್ಲಿ ಸಿಸಿಟಿವಿ ಇರುತ್ತಿದ್ದರೆ ಘಟನೆ ದಾಖಲಾಗುತ್ತಿತ್ತು ಎಂದಿದ್ದಾರೆ. ವಕೀಲರು ಹೀಗೆ ಹೇಳುತ್ತಿದ್ದಂತೆ ಸ್ವಾತಿ ನ್ಯಾಯಾಲಯದಲ್ಲಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.