ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇಂದು ಸ್ಥಳೀಯ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ.
ಈ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ವಿರುದ್ಧದ ಆರೋಪಗಳನ್ನು ದೆಹಲಿ ಪೊಲೀಸರು ಪಟ್ಟಿ ಮಾಡಲಿದ್ದಾರೆ ಎಂದು ವರದಿ ಮಾಡಿದೆ.
ಪೊಲೀಸರು ತನಿಖೆಯನ್ನು ಬಹುತೇಕ ಮುಕ್ತಾಯಗೊಳಿಸಿದ್ದು, ಬಿಭವ್ ಕುಮಾರ್ ವಿರುದ್ಧ ತೀಸ್ ಹಜಾರಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 1,000 ಪುಟಗಳ ಚಾರ್ಜ್‌ಶೀಟ್ ಅನ್ನು ಸಹ ಸಿದ್ಧಪಡಿಸಿದ್ದಾರೆ ಎಂದು ತಿಳಿದು ಬಂದಿದೆ.