Tuesday, March 28, 2023

Latest Posts

ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆ ಅವಧಿ ಮಾ.15ರ ವರೆಗೆ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ವಿವಿಧ ಕೋರ್ಸ್‌ಗಳನ್ನು ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ.

ವಿವಿಧ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಮಾತ್ರ ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್‌ 15,2023 ಕೊನೆಯ ದಿನವಾಗಿರುತ್ತದೆ.

ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ. ಆನ್‌ಲೈನ್‌ ಅರ್ಜಿಗಳನ್ನು ಮಾತ್ರ ಸಲ್ಲಿಸಬೇಕು. ಆನ್‌ಲೈನ್‌ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಇರುವ ಸಂದರ್ಭದಲ್ಲಿ ಕಾಲೇಜಿನ ಹೆಸರನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ / ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಲು ಸೂಚಿಸಲಾಗಿದೆ.

ಕೋರ್ಸ್ ಅನುಸಾರ ಪ್ರೋತ್ಸಾಹಧನ ಮೊತ್ತ ಹೀಗಿದೆ :
ದ್ವಿತೀಯ ಪಿಯುಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೊಮ : 20,000
ಪದವಿ : 25,000
ಯಾವುದೇ ಸ್ನಾತಕೋತ್ತರ ಪದವಿ : 30,000
ಅಗ್ರಿಕಲ್ಚರ್, ಇಂಜಿನಿಯರ್, ವೆಟರಿನರಿ, ಮೆಡಿಷನ್‌: 35,000

ಅರ್ಜಿ ಸಲ್ಲಿಕೆ :

ವಿದ್ಯಾರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://sw.kar.nic.in/index.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಅಗತ್ಯ ದಾಖಲೆಗಳಾದ ಅಂಕಪಟ್ಟಿ, ಪಾಸ್ ಸರ್ಟಿಫಿಕೇಟ್‌, ಆಧಾರ್ ಕಾರ್ಡ್‌, ಬ್ಯಾಂಕ್‌ ಪಾಸ್‌ ಪುಸ್ತಕ, ಫೋಟೋ ಇತರೆ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕಿರುತ್ತದೆ. ಈ ಮೂಲಕ ಮಾರ್ಚ್‌ 15,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!