spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಭಿಮಾನಿಗಳಿಗೆ ಸಿಹಿ ಸುದ್ದಿ: ಸದ್ದಿಲ್ಲದೆ ತೆರೆಗೆ ಬರಲು ಸಜ್ಜಾಗಿದೆ ಪುನೀತ್ ಅಭಿನಯದ ‘ಲಕ್ಕಿಮ್ಯಾನ್’​!

- Advertisement -Nitte

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪವರ್‌ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನದ ಬಳಿಕ ದುಃಖದಲ್ಲಿ ಇರುವ ಅಭಿಮಾನಿಗಳಿಗೆ ಸಿಹಿ ಸುದ್ದಿ ಇದ್ದು, ವಿಶೇಷ ಪಾತ್ರದಲ್ಲಿ ಅಪ್ಪು ಕಾಣಿಸಿಕೊಂಡಿರುವ ಚಿತ್ರವೊಂದು ಸದ್ದಿಲ್ಲದೆ ತೆರೆಗೆ ಬರಲು ಸಜ್ಜಾಗಿದೆ.
ಪರ್ಸಾ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಲಕ್ಕಿಮ್ಯಾನ್’​ ಸಿನಿಮಾದಲ್ಲಿ ಪುನೀತ್​ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸಾಧು ಕೋಕಿಲ ಸ್ಟುಡಿಯೋದಲ್ಲಿ ಡಬ್ಬಿಂಗ್ ಕೆಲಸ ನಡೆಯುತ್ತಿದೆ.
ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕ ನಟನಾಗಿ ಕಾಣಿಸಿಕೊಂಡಿದ್ದು, ಪುನೀತ್ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆಯಿದೆಯಂತೆ. ವಿಶೇಷವಾಗಿ, ಅಪ್ಪು ಹಾಗೂ ಬಹುಭಾಷಾ ನಟ ಪ್ರಭುದೇವ​​​ ಇಬ್ಬರೂ ಡಾ.ರಾಜ್ ಮೇಲೆ ರಚಿಸಲಾದ ಹಾಡೊಂದರಲ್ಲಿ ಒಟ್ಟಿಗೆ ಹೆಜ್ಜೆ ಹಾಕಿದ್ದಾರೆ.
ಈ ಚಿತ್ರದಲ್ಲಿ ನಾಯಕಿಯರಾಗಿ ಸಂಗೀತ ಶೃಂಗೇರಿ ಹಾಗೂ ರೋಶನಿ ಪ್ರಕಾಶ್ ಅಭಿನಯಿಸಿದ್ದಾರೆ. ಉಳಿದಂತೆ ಆರ್ಯ, ರಂಗಾಯಣ ರಘು, ಸಾಧುಕೋಕಿಲ, ನಾಗಭೂಷಣ್, ಸುಂದರ್ ರಾಜ್, ಸುಧಾ ಬೆಳವಾಡಿ, ಮಾಳವಿಕ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.
ಪಿ.ಆರ್.ಮೀನಾಕ್ಷಿ ಸುಂದರಮ್ ಹಾಗೂ ಸುಂದರ ಕಾಮರಾಜ್ ಅವರ ನಿರ್ಮಿಸಿದ್ದು, ಎಸ್.ನಾಗೇಂದ್ರ ಪ್ರಸಾದ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಜೀವಾ ಶಂಕರ್ ಅವರ ಛಾಯಾಗ್ರಹಣವಿದ್ದು, ಹಾಡುಗಳಿಗೆ ವಿಜಯ್ ಮತ್ತು ವಿಕ್ಕಿ ಸಂಗೀತ ಸಂಯೋಜನೆ ಮಾಡಿದ್ದು, ಧನಂಜಯ ರಂಜನ್ ಸಾಹಿತ್ಯ ರಚಿಸಿದ್ದಾರೆ.
ಕಾರ್ತಿಕೇಯನ್ ಕ್ರಿಯೇಟಿವ್ ಪ್ರೊಡ್ಯೂಸರ್‌ ಆಗಿ ವರ್ಕ್ ಮಾಡಿದ್ದಾರೆ. ಬಾಲಾಜಿ ಅವರ ಸಂಕಲನ, ಬರುವ ಡಿಸೆಂಬರ್ ಅಥವಾ ಜನವರಿ ವೇಳೆಗೆ ಚಿತ್ರವನ್ನು ತೆರೆಗೆ ತರುವ ಯೋಜನೆ ಲಕ್ಕಿಮ್ಯಾನ್ ಚಿತ್ರತಂಡಕ್ಕಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss