ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ: ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆಯಲ್ಲಿ ಹೆಚ್ಚಳ

ಹೊಸದಿಗಂತ ಡಿಜಿಟಲ್ ಡೆಸ್ಕ್‌

2022-23 ನೇ ಸಾಲಿನ ವಿವಿಧ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, ವರ್ಷಕ್ಕೆ ಭತ್ತದ ಎಂಎಸ್ಪಿಯನ್ನು ಪ್ರತಿ ಕ್ವಿಂಟಾಲ್ಗೆ 100 ಹೆಚ್ಚಿಸಿದ್ದು, ಈ ಮೂಲಕ ಕ್ವಿಂಟಾಲ್‌ ಭತ್ತದ ಬೆಲೆ ಈಗ 2,040 ಆಗಿದೆ. ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರಕ್ಕೆ ಅನುಮೋದನೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!