ಸೆಣಬು ಬೆಳೆಗಾರರಿಗೆ ಸಿಹಿ ಸುದ್ದಿ: ಬೆಂಬಲ ಬೆಲೆ ಘೋಷಿಸಿದ ಮೋದಿ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರ್ಕಾರವು (Central Government) ಸೆಣಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ್ದು, ಕಚ್ಚಾ ಸೆಣಬಿಗೆ (Raw Jute) 285 ರೂಪಾಯಿ ಕನಿಷ್ಠ ಬೆಂಬಲ ಬೆಲೆ (MSP For Raw Jute) ಘೋಷಿಸಿದೆ.

ಕೇಂದ್ರ ಸರ್ಕಾರವು 2024-25ನೇ ಹಣಕಾಸು ವರ್ಷಕ್ಕಾಗಿ ಬೆಂಬಲ ಬೆಲೆ ಹೆಚ್ಚಿಸಲಾಗಿದ್ದು, ಇದರಿಂದಾಗಿ ಸೆಣಬು ಬೆಳೆಯುವ ರೈತರು ಲಾಭ ಪಡೆಯಲಿದ್ದಾರೆ.

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಕಚ್ಚಾ ಸೆಣಬಿನ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಒಂದು ಕ್ವಿಂಟಾಲ್‌ಗೆ 285 ರೂ. ಬೆಂಬಲ ಬೆಲೆ ಹೆಚ್ಚಿಸಲಾಗಿದೆ. ಇದರೊಂದಿಗೆ ಒಂದು ಕ್ವಿಂಟಾಲ್ ಕಚ್ಚಾ ಸೆಣಬಿಗೆ ಸಿಗುವ ಬೆಂಬಲ ಬೆಲೆಯು 5,335 ರೂಪಾಯಿ ಆಗಿದೆ. ಇದುವರೆಗೆ ಕ್ವಿಂಟಾಲ್‌ ಕಚ್ಚಾ ಸೆಣಬಿಗೆ 5,050 ರೂಪಾಯಿ ಕನಿಷ್ಠ ಬೆಂಬಲ ಬೆಲೆ ನೀಡಲಾಗುತ್ತಿತ್ತು. ಈಗ ಬೆಂಬಲ ಬೆಲೆಯನ್ನು ಶೇ.5.6ರಷ್ಟು ಬೆಂಬಲ ಬೆಲೆಯನ್ನು ಏರಿಕೆ ಮಾಡಲಾಗಿದೆ.

ಪ್ರಧಾನಿ ನ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳ ಕುರಿತು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ಕಚ್ಚಾ ಸೆಣಬಿಗೆ ಬೆಂಬಲ ಬೆಲೆ ಏರಿಕೆ ಮಾಡಿರುವುದರಿಂದ ನೇರವಾಗಿ 40 ಲಕ್ಷ ರೈತರ ಕುಟುಂಬಗಳಿಗೆ ಅನುಕೂಲವಾಗಲಿದೆ. ಸೆಣಬು ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿರುವ 5 ಲಕ್ಷ ಕಾರ್ಮಿಕರಿಗೂ ಕೇಂದ್ರ ಸರ್ಕಾರದ ನಿರ್ಧಾರದಿಂದ ಅನುಕೂಲವಾಗಲಿದೆ ಎಂಬುದಾಗಿ ವಿವರಿಸಿದರು. ದೇಶದಲ್ಲಿ ಪಶ್ಚಿಮ ಬಂಗಾಳದಲ್ಲಿ ಹೆಚ್ಚು ಸೆಣಬು ಬೆಳೆಯಲಾಗುತ್ತದೆ. ಕರ್ನಾಟಕದಲ್ಲೂ ಸೆಣಬು ಬೆಳೆಯುವ ರೈತರಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!