ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಎಲ್ಪಿಜಿ ಸಿಲಿಂಡರ್ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ್ದು, ಗ್ರಾಹಕರು ತಮ್ಮ ಎಲ್ಪಿಜಿ ಸಿಲಿಂಡರ್ ಗಳನ್ನು ಬಯಸುವ ವಿತರಕರಿಂದ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ.
ಮೊದಲ ಹಂತದಲ್ಲಿ ಚಂಡೀಗಢ, ಕೊಯಮತ್ತೂರು, ಗುರುಗ್ರಾಮ್, ಪುಣೆ ಮತ್ತು ರಾಂಚಿ ಗ್ರಾಹಕರಿಗೆ ಈ ಸೌಲಭ್ಯ ಲಭ್ಯವಾಗಲಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ. ಅದ್ರಂತೆ, ಈ ನಗರಗಳಲ್ಲಿ ಯೋಜನೆ ಯಶಸ್ವಿಯಾದ್ರೆ, ದೇಶದ ಇತರ ನಗರಗಳಲ್ಲಿಯೂ ಇದನ್ನ ಜಾರಿಗೆ ತರಲಾಗುವುದು ಎಂದು ಸ್ಪಷ್ಟಿಪಡಿಸಿದೆ.
ಆಯ್ದ ಮಾರಾಟಗಾರರಿಂದ ಎಲ್ಪಿಜಿ ಸಿಲಿಂಡರ್ ಕಾಯ್ದಿರಿಸಬೇಕಿರುವುದರಿಂದ ಗ್ರಾಹಕರಿಗೆ ಅನೇಕ ಸಮಸ್ಯೆ ಎದುರಿಸುವಂತಾಗಿದೆ. ವಿಶೇಷವಾಗಿ ಸಿಲಿಂಡರ್ ಗಳ ಲಭ್ಯತೆ ಕಡಿಮೆ ಇರುವ ದೂರದ ಪ್ರದೇಶಗಳಲ್ಲಿ ವಾಸಿಸುವವರಿಗೆ ಸಮಸ್ಯೆಯಾಗಿದ್ದು, ಈಗ ಯಾವುದೇ ಮಾರಾಟಗಾರರಿಂದ ಸಿಲಿಂಡರ್ ತರಿಸಿಕೊಳ್ಳಬಹುದಾಗಿದೆ ಎಂದು ಹೇಳಲಾಗಿದೆ.