ಬೀದಿ ವ್ಯಾಪಾರಿಗಳಿಗೆ ಸಿಹಿ ಸುದ್ದಿ: ‘ಸ್ವಾನಿಧಿ ಯೋಜನೆ’ 2024 ರವರೆಗೆ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರಕಾರವು 2023ರಲ್ಲಿ ಡಿಜಿಟಲ್ ತಂತ್ರಜ್ಞಾನದ ಸಹಾಯದಿಂದ ಬೀದಿ ಬದಿ ವ್ಯಾಪಾರಿಗಳಿಗೆ 5,000 ರೂ.ವರೆಗಿನ ಕಿರು ಸಾಲ ಸೌಲಭ್ಯವನ್ನ ಒದಗಿಸಲು ವಿಶೇಷ ಒತ್ತು ನೀಡಲಿದೆ ಎಂದು ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.

ಡಿಜಿಟಲ್ ಇಂಡಿಯಾ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ‘2023ರಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ 3 ಸಾವಿರದಿಂದ 5 ಸಾವಿರ ರೂ.ವರೆಗಿನ ಕಿರುಸಾಲದ ಅಗತ್ಯತೆಗಳನ್ನ ಪೂರೈಸಲು ಸರಕಾರ ಗಮನ ಹರಿಸಲಿದೆ ಎಂದರು .

ಸ್ವಾನಿಧಿ ಯೋಜನೆ ವಿಸ್ತರಣೆ
ಅದೇ ರೀತಿ ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆಯನ್ನು ಡಿಸೆಂಬರ್ 2024 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಕೊನೆಯ ದಿನಾಂಕ 31 ಮಾರ್ಚ್ 2023 ರವರೆಗೆ ಇತ್ತು. ಈ ಯೋಜನೆಯಡಿ ಸಣ್ಣ ಉದ್ಯಮಿಗಳು ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡಲಾಗುತ್ತದೆ.

ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಸ್ವಾವಲಂಬಿ ನಿಧಿ (SVANidhi) ಯೋಜನೆಯನ್ನುಜೂನ್ 2020ರಲ್ಲಿ ಮೈಕ್ರೋ ಲೋನ್ ಸೌಲಭ್ಯವಾಗಿ ಪ್ರಾರಂಭಿಸಲಾಯಿತು. ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗುವ ನಷ್ಟವನ್ನ ಸರಿದೂಗಿಸಲು ಬೀದಿ ವ್ಯಾಪಾರಿಗಳಿಗೆ ಅಧಿಕಾರ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!