Wednesday, August 17, 2022

Latest Posts

ರಾಜ್ಯದ ಯಾತ್ರಾರ್ಥಿಗಳಿ ಸಿಹಿ ಸುದ್ದಿ: ಶಬರಿಮಲೆ, ಮಂತ್ರಾಲಯದಲ್ಲಿ ಛತ್ರ ನಿರ್ಮಾಣಕ್ಕೆ ಅನುದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೊರ ರಾಜ್ಯದ ಯಾತ್ರಾಸ್ಥಳಗಳಿಗೆ ತೆರಳುವ ಜನರ ಅನುಕೂಲಕ್ಕಾಗಿ ಕರ್ನಾಟಕ ಛತ್ರ ನಿರ್ಮಾಣ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ.

ಈ ನಿಟ್ಟಿನಲ್ಲಿ ಯಾತ್ರಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಸೌಕರ್ಯಗಳನ್ನು ಅಭಿವೃದ್ದಿಪಡಿಸಲಾಗುವುದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ.

ಸಿಎಂ ಬೊಮ್ಮಾಯಿ ನೇತೃತ್ವದ ಸರಕಾರ ರಾಜ್ಯದಲ್ಲಿನ ವಿವಿಧ ದೇವಸ್ಥಾನಗಳು, ಮಠಗಳು ಹಾಗೂ ಹೊರ ರಾಜ್ಯಗಳಲ್ಲಿರುವ ಕರ್ನಾಟಕ ಛತ್ರಗಳ ಅಭಿವೃದ್ದಿಗಾಗಿ ಕಳೆದ 10 ವರ್ಷಗಳಲ್ಲೇ ಅತಿ ಹೆಚ್ಚು ಅನುದಾನವನ್ನು ನೀಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹೊರ ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಾ ಸ್ಥಳಗಳಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರಗಳ ನಿರ್ಮಾಣ ಹಾಗೂ ಅಭಿವೃದ್ದಿಗೂ ವಿಶೇಷ ಆದ್ಯತೆಯನ್ನು ನೀಡಿದ್ದಾರೆ.

ಶಬರಿಮಲೆ, ಮಂತ್ರಾಲಯ ಹಾಗೂ ಪಂಡರಾಪುರದ ಕರ್ನಾಟಕ ಛತ್ರಗಳ ನಿರ್ಮಾಣ ಮತ್ತು ಅಭಿವೃದ್ದಿಗೆ ವಿಶೇಷ ಅನುದಾನವನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದರು. ಈ ಸಂಬಂಧ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಅತಿಹೆಚ್ಚು ಅನುದಾನ ನೀಡುವ ಮೂಲಕ ಇಲಾಖೆಯ ಅಭಿವೃದ್ದಿಗೆ ಹೆಚ್ಚಿನ ಸಹಕಾರ ನೀಡುತ್ತಿರುವುದಕ್ಕೆ ನಾನು ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

ತಿರುಮಲದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 232 ಕೋಟಿ ರೂಪಾಯಿಗಳಅನುದಾನವನ್ನು ಕಳೆದ ವರ್ಷ ನೀಡಲಾಗಿತ್ತು.ಭವನದ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಆಂಧ್ರಪದ್ರೆಶದ ಶ್ರೀಶೈಲದಲ್ಲಿರುವ ನೂತನ ಕರ್ನಾಟಕ ಛತ್ರದ ನಿರ್ಮಾಣಕ್ಕಾಗಿ 85 ಕೋಟಿ ರೂಪಾಯಿಗಳ ಅನುದಾನವನ್ನು ಮುಖ್ಯಮಂತ್ರಿಗಳ ಈಗಾಗಲೇ ಮಂಜೂರು ಮಾಡಿದ್ದು, ಸದ್ಯದಲ್ಲಿಯೇ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!