ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾರ್ಟ್ ಸರ್ಕ್ಯೂಟ್ನಿಂದ ನಡುರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ನಡೆದಿದೆ.
ನೋಡ ನೋಡುತ್ತಿದ್ದಂತೆ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಬೆಂಕಿಗೆ ಆಹುತಿಯಾಗಿದೆ. ಚಿಕ್ಕಮಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಕಾರಿಗೆ ಬೆಂಕಿ ಹೊತ್ತಿಕೊಂಡಾಗ ನಾಲ್ವರು ಪ್ರಯಾಣಿಕರು ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಕಡೂರು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.