Monday, July 4, 2022

Latest Posts

ಪಶ್ಚಿಮ ಬಂಗಾಳದಲ್ಲಿ ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ಚುನಾಯಿತರಾದ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ನಡೆಯಿತು. ಸ್ಪೀಕರ್ ಸುಬ್ರತಾ ಮುಖರ್ಜಿ ಪ್ರಮಾಣವಚನ ಬೋಧಿಸಿದರು.
ಕೋವಿಡ್-19 ಪ್ರೋಟೋಕಾಲ್‌ಗಳನ್ನು ಅನುಸರಿಸಿ ಇಡೀ ಕಾರ್ಯಕ್ರಮವನ್ನು ನಡೆಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಧಾನಸಭಾ ಕ್ಷೇತ್ರಗಳಾದ ಕೋಲ್ಕತಾ, ಉತ್ತರ ಮತ್ತು ದಕ್ಷಿಣ -24 ಪರಗಣಗಳು, ಪುರ್ಬಾ ಮತ್ತು ಪಶ್ಚಿಮ ಮದಿನಿಪುರ, ಹೌರಾ, ಹೂಗ್ಲಿ ಮತ್ತು ಜಾರ್ಗ್ರಾಮ್ ಪ್ರದೇಶದ ಕನಿಷ್ಠ 143 ಶಾಸಕರು ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.
ಅವರಲ್ಲಿ ಎಪ್ಪತ್ತನಾಲ್ಕು ಜನರು ದಿನದ ಮೊದಲಾರ್ಧದಲ್ಲಿ ಮತ್ತು ಉಳಿದವರು ದ್ವಿತೀಯಾರ್ಧದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದು, ಬಿಜೆಪಿಯ ಯಾವುದೇ ಪ್ರತಿನಿಧಿ ಇಂದು ಸಮಾರಂಭದಲ್ಲಿ ಭಾಗವಹಿಸಲಿಲ್ಲ. ಪ್ರಮಾಣ ವಚನ ಸ್ವೀಕಾರ ಸಮಾರಂಭ ಶನಿವಾರದವರೆಗೆ ಮುಂದುವರಿಯಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss