Wednesday, August 10, 2022

Latest Posts

ಅ.28 ರಂದು ಕೃಷಿ ಕಾಯಿದೆಗಳ ದುಷ್ಪರಿಣಾಮದ ಬಗ್ಗೆ ವಿಚಾರ ಸಂಕಿರಣ

ದಿಗಂತ ವರದಿ ಶಿವಮೊಗ್ಗ :

ನಾಗಸಮುದ್ರ ರೈತ ಹುತಾತ್ಮರಿಗೆ ಗೌರವ ಸಮರ್ಪಣೆ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ರೈತ ವಿರೋಧಿಕೃಷಿ ಕಾಯಿದೆಗಳ ದುಷ್ಪರಿಣಾಮದ ಬಗ್ಗೆ ವಿಚಾರ ಸಂಕಿರಣವನ್ನು ಅ.28 ರಂದು ಸಂಜೆ 4 ಗಂಟೆಗೆ ಭದ್ರಾವತಿ ತಾಲೂಕು ನಾಗಸಮುದ್ರದ ಮಲ್ಲೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಗೌರವಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್ ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಜಾರಿಗೆ ತಂದಿರುವ ಕೃಷಿ ಕಾಯಿದೆಗಳು ರೈತರಿಗೆ ಹೇಗೆ ಮಾರಕ ಎಂಬುದನ್ನು ದಾಖಲೆಗಳ ಸಮೇತ ವಿವರಿಸಲಿದ್ದಾರೆ. ರೈತರು, ಕೃಷಿ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ವ್ಯಾಪಾರಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಂದೇಹ ಪರಿಹರಿಸಿಕೊಳ್ಳಬಹುದಾಗಿದೆ ಎಂದರು.

ಕೃಷಿ ಕಾಯಿದೆಗಳು ರೈತರಿಗೆ ಮರಣ ಶಾಸನವಾಗಲಿರುವುದರಿಂದ ಇವುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯಲ್ಲಿ ಈಗಾಗಲೇ ರೈತರು ಹೋರಾಟ ನಡೆಸುತ್ತಿದ್ದಾರೆ. ಆದರೆ ಬಿಜೆಪಿಯವರು ಮಾತ್ರ ಕಾಯಿದೆಗಳನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಯಾವ ದೃಷ್ಟಿಕೋನದಲ್ಲಿ ಈ ಕಾಯಿದೆಗಳು ರೈತರಿಗೆ ಪೂರಕ ಎಂಬುದನ್ನು ದಾಖಲೆಗಳ ಸಮೇತ ಮನದಟ್ಟು ಮಾಡಿದರೆ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟ ಹಿಂಪಡೆಯಲಾಗುತ್ತದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss