ಟಿ–20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ‘ನಂದಿನಿ’ ಲಾಂಛನ: ಹರ್ಷ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಐಸಿಸಿ ಪುರುಷರ ಟಿ–20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿ(KMF) ಸ್ಕಾಟ್ಲೆಂಡ್(Scotland) ಮತ್ತು ಐರ್ಲೆಂಡ್(Ireland) ತಂಡಗಳ ಪ್ರಾಯೋಜಕತ್ವ ಪಡೆದಿದೆ.

ಇದೀಗ ‘ನಂದಿನಿ’ ಲಾಂಛನ(nandini milk logo) ಇರುವ ನೂತನ ಜೆರ್ಸಿಯನ್ನು ಸ್ಕಾಟ್ಲೆಂಡ್ ತಂಡ ಬುಧವಾರ ಬಿಡುಗಡೆ ಮಾಡಿತ್ತು. ಕೆಎಂಎಫ್‌ ಕೇಂದ್ರ ಕಚೇರಿಯಲ್ಲಿ ನಡೆದ ವರ್ಚುವಲ್‌ ಮಾದರಿಯ ಸಭೆಯಲ್ಲಿ ಈ ಜೆರ್ಸಿಯನ್ನು ಬಿಡುಗಡೆಗೊಳಿಸಲಾಗಿತ್ತು.

ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಗುರುವಾರ ತಮ್ಮ ಅಧಿಕೃತ ಟ್ವಿಟರ್​ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿ ಹರ್ಷ ವ್ಯಕ್ತಪಡಿಸಿ, ‘ನಂದಿನಿ’ ಲಾಂಛನ ಜಾಗತಿಕ ಬ್ರ್ಯಾಂಡ್‌ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆ ಎಂದು ಹೇಳಿದ್ದಾರೆ.

“ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ನಂದಿನಿಯ ಹೆಸರು ರಾರಾಜಿಸಲಿದೆ. ಕನ್ನಡದ ಕಂಪು ಕಂಗೊಳಿಸಲಿದೆ” ಎಂದು ಬಣ್ಣಿಸಿದ್ದಾರೆ.

ಈಗಾಗಲೇ ಮಲೇಷ್ಯಾ, ವಿಯೆಟ್ನಾಂ, ಸಿಂಗಾಪುರ, ಅಮೆರಿಕ, ದುಬೈ, ಯುಎಇ ಸೇರಿ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದರು.

ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಎಡಗೈ ಬ್ಯಾಟ್ಸ್‌ಮನ್‌ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳ ಎಡಗೈ ಮೇಲೆ ನಂದಿನಿ ಲೋಗೋ ಕನ್ನಡ ಮತ್ತು ಇಂಗ್ಲೀಸ್​ನಲ್ಲಿ ಕಾಣಿಸಿಕೊಳ್ಳಲಿದೆ. ಐರ್ಲೆಂಡ್ ತಂಡ ಜೆರ್ಸಿ ಇನ್ನಷ್ಟೇ ಅನಾವರಣಗೊಳ್ಳಬೇಕಿದೆ. ಮಿನಿ ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!