ಟಿ-20 ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಬೃಹತ್ ಮೊತ್ತ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಟಿ-20 ಕ್ರಿಕೆಟ್‌ನಲ್ಲಿ ಸತತ 12  ಪಂದ್ಯಗಳನ್ನು ಗೆದ್ದಿರುವ ಭಾರತ ಇದೀಗ ಗುರುವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಬೃಹತ್ ಮೊತ್ತ ಸೇರಿಸಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ 20 ಓವರುಗಳಲ್ಲಿ 4 ವಿಕೆಟ್ ಕಳಕೊಂಡು 211 ರನ್ ಗಳಿಸಿದೆ.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಭಾರತವನ್ನು ಮೊದಲು ಬ್ಯಾಟ್ ಮಾಡಲು ಆಹ್ವಾನಿಸಿತು. ಆರಂಭಿಕ ಬ್ಯಾಟರ್‌ಗಳಾದ ಇಶಾನ್ ಕಿಶನ್ ಮತ್ತು ರುತುರಾಜ್ ಗಾಯಕ್‌ವಾಡ್ ಉತ್ತಮ ಅಡಿಪಾಯ ಹಾಕಿದರು. ಇಶಾನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. 48 ಬಾಲುಗಳಲ್ಲಿ 11 ಬೌಂಡರಿ ಹಾಗೂ 3 ಸಿಕ್ಸ್‌ಗಳನ್ನೊಳಗೊಂಡ 76 ರನ್ ಚಚ್ಚಿದರೆ, ರುತುರಾಜ್ 23, ಶ್ರೇಯಸ್ ಅಯ್ಯರ್ 36, ರಿಷಬ್ ಪಂತ್ 29 ಹಾಗೂ ಹಾರ್ದಿಕ್ ಪಾಂಡ್ಯ 31 ರನ್ ಗಳಿಸಿ ಭಾರತದ ಬೃಹತ್ ಮೊತ್ತಕ್ಕೆ ಕಾರಣರಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!