ಟಿ. ನರಸೀಪುರ ಬಳಿ ಸ್ಫೋಟಕಗಳು ಪತ್ತೆ, ಪ್ಲಾಸ್ಟಿಕ್‌ ಕವರ್‌ನಲ್ಲಿ ಇಟ್ಟು ಪರಾರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್​ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿವೆ.

ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್​ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್​ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ, ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕ ವಸ್ತುಗಳು ಮತ್ತು ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ.

ಕಲ್ಲು ಗಣಿಗಾರಿಕೆಗೆ ಮತ್ತು ಪ್ರಾಣಿಗಳ ಬೇಟೆಗೆ ಸ್ಫೋಟಕಗಳನ್ನು ಬಳಸಲು ತೆಗೆದುಕೊಂಡು ಹೋಗುತ್ತಿದ್ದರು ಎಂದು ಸಂಶಯ ವ್ಯಕ್ತವಾಗಿದೆ. ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಸ್ಪೋಟಕ ವಸ್ತುಗಳನ್ನು ವಶಕ್ಕೆ ಪಡೆದು, ಹೋಟೆಲ್​ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!