September 13, 2026
Sunday, September 13, 2026
spot_img

ಗಣೇಶೋತ್ಸವ ಮೆರವಣಿಗೆ ವಿವಾದ: ರಣರಂಗವಾದ ಟಿ. ನರಸೀಪುರ, ಆರ್. ಅಶೋಕ್ ಸೇರಿ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಣೇಶೋತ್ಸವ ಮೆರವಣಿಗೆ ಕುರಿತು ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ್ ಗಣೇಶೋತ್ಸವ ಆಚರಣೆ ಮಾಡುವ ಯುವಕರಿಗೆ ‘ಮಸೀದಿ ಮುಂದೆ ಮೆರವಣಿಗೆ ಮಾಡಿ ಪಟಾಕಿ ಸಿಡಿಸಿದರೆ ಗ್ರಹಚಾರ ಬಿಡಿಸುತ್ತೇನೆ’ ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನುವ ವಿಚಾರ ಈಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್‌ಸ್ಪೆಕ್ಟರ್ ರನ್ನು ಅಮಾನತು ಮಾಡಿ

ಇನ್‌ಸ್ಪೆಕ್ಟರ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಶ್ರೀವತ್ಸ ಸೇರಿದಂತೆ ಹಲವು ಬಿಜೆಪಿ ನಾಯಕರು ಹಾಗೂ ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:

ಇನ್‌ಸ್ಪೆಕ್ಟರ್ ಧನಂಜಯ್ ಎಚ್ಚರಿಕೆ ನೀಡಿದ್ದರು ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಇದಕ್ಕೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಅಷ್ಟೇ ಅಲ್ಲದೆ ಪ್ರತಿಭಟನಾಕಾರರು ಗಣೇಶನ ಮೂರ್ತಿಯೊಂದಿಗೆ ಮೆರವಣಿಗೆ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ತಡೆದರು.

ವಿಕೋಪಕ್ಕೆ ತಿರುಗಿದ ಪರಿಸ್ಥಿತಿ

ಪ್ರತಿಭಟನೆ ವಿಕೋಪಕ್ಕೆ ತಿರುಗುವ ಸಾಧ್ಯತೆ ಎದುರಾಗಿರುವ ಕಾರಣ ಹೆಚ್ಚುವರಿ ಪೊಲೀಸ್ ಪಡೆ ಸ್ಥಳಕ್ಕೆ ಆಗಮಿಸಿ, ಪ್ರತಿಭಟನಾಕಾರರನ್ನು ವಾಹನಗಳಲ್ಲಿ ಕರೆದೊಯ್ದು ವಶಕ್ಕೆ ಪಡೆದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !