ಟಿ20 ರ‍್ಯಾಂಕಿಂಗ್ ಪ್ರಕಟ: ಆರನೇ ಸ್ಥಾನಕ್ಕೆ ಜಿಗಿದ ಯಶಸ್ವಿ ಜೈಸ್ವಾಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಸಿಸಿ ಮಂಡಳಿ ಬಿಡುಗಡೆ ಮಾಡಿದ ಇತ್ತೀಚಿನ ಐಸಿಸಿ ಶ್ರೇಯಾಂಕದಲ್ಲಿ ಯಶಸ್ವಿ ಜೈಸ್ವಾಲ್ ಮೇಲಕ್ಕೇರಿದ್ದಾರೆ

ಜಿಂಬಾಬ್ವೆ ಪ್ರವಾಸದಲ್ಲಿ ಜೈಸ್ವಾಲ್ ಒಟ್ಟಾರೆ 141 ರನ್​ಗಳೊಂದಿಗೆ ಸರಣಿ ಮುಗಿಸಿ ರ್ಯಾಂಕಿಂಗ್​ನಲ್ಲಿ ಆರನೇ ಸ್ಥಾನಕ್ಕೆ ಜಿಗಿದಿದ್ದಾರೆ. ಟಿ 20 ಐನಲ್ಲಿ ಅವರು ಎರಡನೇ ಅತ್ಯುನ್ನತ ಶ್ರೇಯಾಂಕದ ಭಾರತೀಯ ಬ್ಯಾಟರ್ ಆಗಿದ್ದಾರೆ. ಸೂರ್ಯಕುಮಾರ್ ಯಾದವ್ ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಪ್ರಸ್ತುತ ವಿಶ್ವದ ಅಗ್ರ ಶ್ರೇಯಾಂಕ ಹೊಂದಿದ್ದಾರೆ.

ಜಿಂಬಾಬ್ವೆ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ನಂತರ ಶುಬ್ಮನ್ ಗಿಲ್ ಕೂಡ ಶ್ರೇಯಾಂಕದಲ್ಲಿ ದೊಡ್ಡ ಏರಿಕೆ ಮಾಡಿದ್ದಾರೆ. ಬಲಗೈ ಬ್ಯಾಟರ್​ ತಮ್ಮ ತಂಡವನ್ನು ಮುನ್ನಡೆಸಿದ್ದಾರೆ. ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರಾಗಿ ಮುಗಿಸಿದ್ದಾರೆ. 2 ಅರ್ಧಶತಕಗಳ ಸಹಾಯದಿಂದ 170 ರನ್ ಗಳಿಸಿದ್ದಾರೆ. ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ ಅವರು 36 ಸ್ಥಾನ ಮೇಲಕ್ಕೇರಿ 37ನೇ ಸ್ಥಾನ ಪಡೆದುಕೊಂಡಿದ್ದಾರೆ.

ಬೌಲರ್​ಗಳ ಪೈಕಿ ಜಿಂಬಾಬ್ವೆ ವೇಗಿ ಬ್ಲೆಸ್ಸಿಂಗ್ ಮುಜರಬಾನಿ 11 ಸ್ಥಾನ ಮೇಲಕ್ಕೇರಿ 44ನೇ ಸ್ಥಾನಕ್ಕೇರಿದ್ದಾರೆ. ಭಾರತದ ವಿರುದ್ಧ ಮುಜರಬಾನಿ ಆರು ವಿಕೆಟ್ ಪಡೆದಿದ್ದಾರೆ. ವಾಷಿಂಗ್ಟನ್ ಸುಂದರ್ 36 ಸ್ಥಾನ ಮೇಲಕ್ಕೇರಿ 46ನೇ ಸ್ಥಾನದಲ್ಲಿದ್ದರೆ, ಮುಖೇಶ್ ಕುಮಾರ್ 21 ಸ್ಥಾನ ಮೇಲೇರಿ 73ನೇ ಸ್ಥಾನಕ್ಕೇರಿದ್ದಾರೆ.

ಇಂಗ್ಲೆಂಡ್ ಸ್ಪಿನ್ನರ್ ಆದಿಲ್ ರಶೀದ್ ಪ್ರಸ್ತುತ ವಿಶ್ವದ ನಂಬರ್ ಒನ್ ಟಿ 20 ಬೌಲರ್ ಆಗಿದ್ದಾರೆ. ಅಕ್ಷರ್ ಪಟೇಲ್ ಟಿ20ಐನಲ್ಲಿ 13ನೇ ಸ್ಥಾನದಲ್ಲಿದ್ದಾರೆ. ಆಲ್​ರೌಂಡರ್​ಗಳ ಪೈಕಿ ವನಿಂದು ಹಸರಂಗ ಅಗ್ರಸ್ಥಾನದಲ್ಲಿದ್ದರೆ, ಹಾರ್ದಿಕ್ ಪಾಂಡ್ಯ (6ನೇ ಸ್ಥಾನ) 10ರೊಳಗೆ ಸ್ಥಾನ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!