ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, May 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಟ್ವೆಂಟಿ-20 ರ‍್ಯಾಂಕಿಂಗ್‌: ಎರಡನೇ ಸ್ಥಾನ ಭದ್ರಪಡಿಸಿದ ಟೀಮ್ ಇಂಡಿಯಾ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ನ (ಐಸಿಸಿ) ಟ್ವೆಂಟಿ-20 ರ‍್ಯಾಂಕಿಂಗ್‌ನಲ್ಲಿ ಭಾರತ ತಂಡವು ಎರಡನೇ ಸ್ಥಾನವನ್ನು ಉಳಿಸಿಕೊಂಡಿದೆ. ಸೋಮವಾರ ವಾರ್ಷಿಕ ಕ್ರಮಾಂಕಗಳನ್ನು ಪ್ರಕಟಿಸಲಾಗಿದ್ದು, ಏಕದಿನ ಮಾದರಿಯಲ್ಲಿ ಕೊಹ್ಲಿ ಬಳಗವು ಮೂರನೇ ಸ್ಥಾನಕ್ಕೆ ಕುಸಿದಿದೆ.

ಟಿ20 ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿ ಇಂಗ್ಲೆಂಡ್‌ ಇದ್ದು, ಭಾರತ ಐದು ರೇಟಿಂಗ್ ಪಾಯಿಂಟ್ಸ್‌ ಹಿಂದೆ ಇದೆ. ನ್ಯೂಜಿಲೆಂಡ್‌ ತಂಡವು ಪ್ರಗತಿ ಸಾಧಿಸಿದ್ದು, ಐದನೇ ಸ್ಥಾನದಿಂದ ಮೂರನೇ ಕ್ರಮಾಂಕಕ್ಕೆ ಬಡ್ತಿ ಪಡೆದಿದೆ. ವೆಸ್ಟ್ ಇಂಡೀಸ್‌, ಪಾಕಿಸ್ತಾನ, ಆಸ್ಟ್ರೇಲಿಯಾ ಹಾಗೂ ಬಾಂಗ್ಲಾದೇಶ ತಂಡಗಳ ಎದುರಿನ ಸರಣಿ ವಿಜಯಗಳು ಕಿವೀಸ್ ತಂಡದ ಪಾಯಿಂಟ್ಸ್ ಏರಿಕೆಗೆ ಕಾರಣವಾಗಿದೆ. ಮೂರನೇ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ಐದಕ್ಕೆ ಜಾರಿದೆ.

ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳು ಒಂದು ಸ್ಥಾನ ಬಡ್ತಿ ಪಡೆದಿದ್ದು, ಕ್ರಮವಾಗಿ ಎಂಟು ಮತ್ತು ಒಂಬತ್ತನೇ ಸ್ಥಾನದಲ್ಲಿವೆ. ವೆಸ್ಟ್ ಇಂಡೀಸ್ 10ನೇ ಸ್ಥಾನಕ್ಕೆ ಕುಸಿದಿದೆ.

ಏಕದಿನ ರ‍್ಯಾಂಕಿಂಗ್‌ನಲ್ಲಿ ಭಾರತ ಒಂದು ಸ್ಥಾನ ಕುಸಿತ ಕಂಡಿದ್ದು, ಮೂರನೇ ಸ್ಥಾನದಲ್ಲಿದೆ. ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ಕ್ರಮವಾಗಿ ಮೊದಲ ಮತ್ತು ಎರಡನೇ ಕ್ರಮಾಂಕದಲ್ಲಿವೆ. ಕಿವೀಸ್ ತಂಡವು ಹಾಲಿ ವಿಶ್ವ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ. ಇಂಗ್ಲೆಂಡ್ ಸದ್ಯ ನಾಲ್ಕನೇ ಸ್ಥಾನದಲ್ಲಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss