September 24, 2026
Thursday, September 24, 2026
spot_img

ಟಿ20 ವಿಶ್ವಕಪ್ । ಪಾಕ್-ನ್ಯೂಜಿಲೆಂಡ್ ಸೂಪರ್ 8 ಮ್ಯಾಚ್ ಆರಂಭಕ್ಕೆ ವರುಣ ಅಡ್ಡಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್ ನ ಮೊದಲ ಸೂಪರ್ -8 ರ ಗ್ರೂಪ್ -2 ಪಂದ್ಯದಲ್ಲಿ ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಪಾಕಿಸ್ತಾನ ತಂಡ ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.

ಇತ್ತ ಕೊಲಂಬೊದ ಆರ್.ಪ್ರೇಮದಾಸ ಕ್ರೀಡಾಂಗಣ ಪಂದ್ಯಕ್ಕೆ ಸಜ್ಜಾಗಿದ್ದು, ಆದರೆ ತುಂತುರು ಮಳೆ ಆಗಮನವಾಗಿದ್ದು, ಹೀಗಾಗಿ ಮ್ಯಾಚ್ ಸದ್ಯಕ್ಕೆ ಸ್ಥಗಿತಗೊಂಡಿದೆ.

ಎರಡೂ ತಂಡಗಳು ಗುಂಪು ಹಂತದಲ್ಲಿ ತಲಾ ಮೂರು ಗೆಲುವು ಹಾಗೂ 1 ಸೋಲಿನೊಂದಿಗೆ ಸೂಪರ್ 8 ಹಂತಕ್ಕೆ ಬಂದಿವೆ. ಗೆದ್ದ ತಂಡದ ಸೆಮಿಫೈನಲ್ ಪ್ರವೇಶ ಸುಲಭವಾಗಲಿದೆ.

ಪಾಕಿಸ್ತಾನ (ಪ್ಲೇಯಿಂಗ್ XI): ಸಾಹಿಬ್ಜಾದಾ ಫರ್ಹಾನ್, ಸೈಮ್ ಅಯೂಬ್, ಸಲ್ಮಾನ್ ಅಘಾ(ನಾಯಕ), ಬಾಬರ್ ಆಜಮ್, ಫಖರ್ ಜಮಾನ್, ಉಸ್ಮಾನ್ ಖಾನ್ (ವಿಕೀ), ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಸಲ್ಮಾನ್ ಮಿರ್ಜಾ, ಉಸ್ಮಾನ್ ತಾರಿಕ್.

ನ್ಯೂಜಿಲೆಂಡ್ (ಪ್ಲೇಯಿಂಗ್ XI): ಟಿಮ್ ಸೀಫರ್ಟ್ (ವಿಕೀ), ಫಿನ್ ಅಲೆನ್, ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಜೇಮ್ಸ್ ನೀಶಮ್, ಮ್ಯಾಟ್ ಹೆನ್ರಿ, ಇಶ್ ಸೋಧಿ, ಲಾಕಿ ಫರ್ಗುಸನ್.

Must Read