ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡವು ಜಿಂಬಾಬ್ವೆ ವಿರುದ್ದ 31 ರನ್ಗಳ ರೋಚಕ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಸೂಪರ್ 12 ಹಂತಕ್ಕೇರುವ ಅವಕಾಶವನ್ನು ನಿಕೋಲಸ್ ಪೂರನ್ ಪಡೆ ಜೀವಂತವಾಗಿರಿಸಿಕೊಂಡಿದೆ.
154 ರನ್ಗಳ ಸವಾಲಿನ ಗುರಿ ಬೆನ್ನತ್ತಿದ ಜಿಂಬಾಬ್ವೆ ತಂಡವು ಕೇವಲ 122 ರನ್ಗಳಿಗೆ ಸರ್ವಪತನ ಕಂಡಿದೆ.
ಮೊದಲ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ದ ಮುಗ್ಗರಿಸಿದ್ದ ವೆಸ್ಟ್ ಇಂಡೀಸ್ ತಂಡಕ್ಕೆ, ಜಿಂಬಾಬ್ವೆ ಎದುರಿನ ಪಂದ್ಯವು ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿತ್ತು. ಆದರೆ ಬ್ಯಾಟಿಂಗ್ ವೈಫಲ್ಯದ ಹೊರತಾಗಿಯೂ ಬೌಲಿಂಗ್ನಲ್ಲಿ ಸಂಘಟಿತ ಪ್ರದರ್ಶನ ತೋರುವ ಮೂಲಕ ವಿಂಡೀಸ್ ತಂಡವು ಗೆಲುವಿನ ನಿಟ್ಟುಸಿರು ಬಿಟ್ಟಿದೆ.