March 18, 2026
Wednesday, March 18, 2026
spot_img

T20 World Cup 2026 | ಸೆಮಿಫೈನಲ್‌ಗೆ ಭಾರತ ಎಂಟ್ರಿ ಆಗಲ್ಲ: ಪಾಕ್ ಕ್ರಿಕೆಟಿಗನ ಭವಿಷ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್ 2026ರಲ್ಲಿ ಲೀಗ್ ಹಂತದ ನಾಲ್ಕೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಭಾರತ ತಂಡ ಸೂಪರ್-8ಕ್ಕೆ ಪ್ರವೇಶಿಸಿದೆ. ಆದರೆ ಮುಂದಿನ ಹಂತದಲ್ಲಿ ಟೀಮ್ ಇಂಡಿಯಾ ಸೆಮಿಫೈನಲ್‌ಗೆ ತಲುಪುವುದಿಲ್ಲ ಎಂದು ಪಾಕಿಸ್ತಾನದ ಮಾಜಿ ವೇಗಿ ಮೊಹಮ್ಮದ್ ಅಮೀರ್ ಅಭಿಪ್ರಾಯಪಟ್ಟಿದ್ದಾರೆ.

ಸೂಪರ್-8 ಹಂತದಲ್ಲಿ ಭಾರತ ತಂಡ ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ಟೀಮ್ ವಿರುದ್ಧ ಕಣಕ್ಕಿಳಿಯಲಿದೆ. ಈ ಪೈಕಿ ಪ್ರಮುಖ ತಂಡಗಳ ವಿರುದ್ಧ ಜಯ ಸಾಧಿಸುವುದು ಸುಲಭವಲ್ಲ ಎಂದು ಅಮಿರ್ ಹೇಳಿದ್ದಾರೆ.

ಇದನ್ನೂ ಓದಿ:

ಲೀಗ್ ಹಂತದಲ್ಲಿ ಅಜೇಯವಾಗಿದ್ದರೂ, ಭಾರತ ಬ್ಯಾಟಿಂಗ್ ಕ್ರಮದಲ್ಲಿ ಸ್ಥಿರತೆ ಕೊರತೆಯಿದೆ ಎಂಬುದು ಅವರ ವಾದ. ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಹೊರತುಪಡಿಸಿ, ಇತರ ಪಂದ್ಯಗಳಲ್ಲಿ ಬ್ಯಾಟಿಂಗ್ ಲೈನಪ್ ನಿರೀಕ್ಷಿತ ಮಟ್ಟದಲ್ಲಿ ಕಾಣಿಸಿಕೊಂಡಿಲ್ಲ ಎಂದು ಅವರು ಸೂಚಿಸಿದ್ದಾರೆ. ವಿಶೇಷವಾಗಿ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ನಿರಂತರವಾಗಿ ವಿಫಲರಾಗಿರುವುದನ್ನೂ ಉಲ್ಲೇಖಿಸಿದ್ದಾರೆ.

ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ಸಾಂಘಿಕ ಪ್ರದರ್ಶನ ನೀಡುತ್ತಿರುವುದರಿಂದ, ಗ್ರೂಪ್-ಎ ಯಿಂದ ಆ ಎರಡು ತಂಡಗಳೇ ಸೆಮಿಫೈನಲ್‌ಗೆ ಸಾಗುವ ಸಾಧ್ಯತೆ ಇದೆ ಎಂದು ಅಮಿರ್ ಅಭಿಪ್ರಾಯಪಟ್ಟಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !