ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಟೀಂ ಇಂಡಿಯಾ ಅಬ್ಬರಿಸುತ್ತಿದ್ದು, ಆದರೆ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮತ್ತೆ ಕೈಕೊಟ್ಟಿದ್ದಾರೆ.
ಇಡೀ ವಿಶ್ವಕಪ್ನಲ್ಲಿ ಅಭಿಷೇಕ್ ಶರ್ಮಾ ಒಂದು ಅರ್ಧಶತಕವನ್ನು ಬಾರಿಸಿದ್ದನ್ನು ಬಿಟ್ಟರೆ ಉಳಿದ ಪಂದ್ಯದಲ್ಲಿ ಪರಿಣಾಮಕಾರಿಯಾಗಿಲ್ಲ. ಹೀಗಾಗಿ ಮಾಡು ಇಲ್ಲವೇ ಮಡಿ ಪಂದ್ಯದಲ್ಲಾದರೂ ಅಭಿಷೇಕ್ ಅಬ್ಬರಿಸುತ್ತಾರಾ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಶರ್ಮ, ದೊಡ್ಡ ಹೊಡೆತವನ್ನು ಆಡುವ ಯತ್ನದಲ್ಲಿ ವಿಕೆಟ್ ಕಳೆದುಕೊಂಡಿದ್ದಾರೆ. ಅಭಿಷೇಕ್ ಶರ್ಮಾ ಬ್ಯಾಟಿಂಗ್ ವೈಖರಿ ಬಗ್ಗೆ ಕ್ರಿಕೆಟ್ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.



