T20 World Cup | ಆಸೀಸ್​ ವಿರುದ್ಧ ಹೋರಾಡಿ ಸೋತ ಅಫ್ಘಾನಿಸ್ತಾನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಶೀದ್ ಖಾನ್ ಸ್ಪೋಟಕ ಬ್ಯಾಟಿಂಗ್ ಹೊರತಾಗಿಯೂ ಆಸ್ಟ್ರೇಲಿಯಾ ಎದುರು ಆಫ್ಘಾನಿಸ್ತಾನ4 ರನ್ ರೋಚಕ ಸೋಲು ಅನುಭವಿಸಿದೆ.

ಆಸ್ಟ್ರೇಲಿಯಾ ನೀಡಿದ್ದ 169 ರನ್‌ಗಳ ಗುರಿ ಬೆನ್ನತ್ತಿದ ಆಫ್ಘಾನಿಸ್ತಾನ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 164 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರಿಂದ ಆಸ್ಟ್ರೇಲಿಯಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮೀಸ್‌ಗೇರುವ ಅವಕಾಶವನ್ನು ಜೀವಂತವಾಗಿರಿಸಿಕೊಂಡಿದ್ದು, ಆಫ್ಘಾನಿಸ್ತಾನ ಅಭಿಯಾನ ಮುಗಿಸಿದೆ.

ಆಸ್ಟ್ರೇಲಿಯಾ ನೀಡಿದ್ದ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಆಫ್ಘಾನಿಸ್ತಾನ ತಂಡವು ಘನಿ ಕೇವಲ 2 ರನ್ ಗಳಿಸಿ ವಿಕೆಟ್‌ ಒಪ್ಪಿಸಿದರು. ಇನ್ನು ವಿಕೆಟ್ ಕೀಪರ್ ಬ್ಯಾಟರ್ ರೆಹಮನುಲ್ಲಾ ಗುರ್ಬಾಜ್ ಕೇವಲ 30 ರನ್ ಬಾರಿಸಿ ಕೇನ್ ರಿಚರ್ಡ್‌ಸನ್‌ಗೆ ವಿಕೆಟ್‌ ಒಪ್ಪಿಸಿದರು.ಒಂದು ಹಂತದಲ್ಲಿ 40 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡಿದ್ದ ಆಫ್ಘಾನಿಸ್ತಾನ ತಂಡಕ್ಕೆ ಮೂರನೇ ವಿಕೆಟ್‌ಗೆ ಇಬ್ರಾಹಿಂ ಜದ್ರಾನ್ ಹಾಗೂ ಗುಲ್ಬದ್ದೀನ್ ನೈಬ್ 59 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆಆಸರೆಯಾದರು.

ಗುಲ್ಬದ್ದೀನ್ ನೈಬ್ 23 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 39 ರನ್ ಬಾರಿಸಿ ರನೌಟ್ ಆಗಿ ಪೆವಿಲಿಯನ್ ಸೇರಿದರು. ಇಬ್ರಾಹಿಂ ಜದ್ರಾನ್ 26 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಜದ್ರಾನ್ ಹಾಗೂ ನೈಬ್ ಆಕರ್ಷಕ ಜತೆಯಾಟದ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ಯುತ್ತಿದ್ದರು. ಆದರೆ 14ನೇ ಓವರ್‌ನ ಮೊದಲ ಎಸೆತದಲ್ಲಿ ಎರಡು ರನ್ ಕದಿಯುವ ಯತ್ನದಲ್ಲಿ ರನೌಟ್ ಆದರು. ಇದರ ಬೆನ್ನಲ್ಲೇ ಮರು ಎಸೆತದಲ್ಲೇ ಜದ್ರಾನ್ ಕೂಡ ಮಿಚೆಲ್‌ ಮಾರ್ಶ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಇನ್ನು 4ನೇ ಎಸೆತದಲ್ಲಿ ನಜೀಬುಲ್ಲಾ ಜದ್ರಾನ್ ಕೂಡಾ ವಿಕೆಟ್ ಒಪ್ಪಿಸಿದರು.

103 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡು ಸೋಲಿನತ್ತ ಮುಖಮಾಡಿದ್ದ ಆಫ್ಘಾನ್ ಪಾಳಯದಲ್ಲಿ ರಶೀದ್ ಖಾನ್ ಗೆಲುವಿನ ಆಸೆ ಮೂಡಿಸಿದರು. ಆದರೆ 23 ಎಸೆತಗಳಲ್ಲಿ ರಶೀದ್ ಖಾನ್ ಅಜೇಯ 48 ರನ್ ಬಾರಿಸಿದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!