March 4, 2026
Wednesday, March 4, 2026
spot_img

ಟಿ20 ವಿಶ್ವಕಪ್​ | ಆಲೆನ್‌ ಸ್ಪೋಟಕ ಶತಕ: ಆಫ್ರಿಕಾ ವಿರುದ್ಧ ಗೆದ್ದು ಫೈನಲ್‌ಗೆ ಲಗ್ಗೆಯಿಟ್ಟ ನ್ಯೂಜಿಲೆಂಡ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆದ್ದು ಫೈನಲ್‌ಗೆ ಲಗ್ಗೆಯಿಟ್ಟಿದೆ .

ಫಿನ್​ ಅಲೆನ್ ಸಿಡಿಸಿದ ಸ್ಫೋಟಕ ಶತಕದ ನೆರವಿನಿಂದ ನ್ಯೂಜಿಲ್ಯಾಂಡ್ ತಂಡ ದಕ್ಷಿಣ ಆಫ್ರಿಕಾ ತಂಡವನ್ನು 9 ವಿಕೆಟ್​ಗಳಿಂದ ಸೋಲಿಸಿ 2ನೇ ಬಾರಿಗೆ ಫೈನಲ್​ ಪ್ರವೇಶಿಸಿದೆ.

170 ರನ್​ಗಳ ಗುರಿಯನ್ನ ಬೆನ್ನಟ್ಟಿದ ಕಿವೀಸ್ ಕೇವಲ 17.5 ಓವರ್​ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ತಲುಪಿತು. ಆರಂಭಿಕ ಆಟಗಾರ ಫಿನ್ ಅಲೆನ್ 33 ಎಸೆತಗಳಲ್ಲಿ 10 ಬೌಂಡರಿ, 8 ಸಿಕ್ಸರ್​ಗಳ ಸಹಿತ ಅಜೇಯ 100 ರನ್​ಗಳಿಸಿ ತಂಡವನ್ನ ಗೆಲುವಿನ ಗಡಿ ದಾಟಿಸಿದರು. ಟಿಮ್ ಸೀಫರ್ಟ್ 33 ಎಸೆತಗಳಲ್ಲಿ 7 ಬೌಂಡರಿ, 2 ಸಿಕ್ಸರ್​ ಸಹಿತ 58 ರನ್​ಗಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !