ಟೀಮ್ ಇಂಡಿಯಾಕ್ಕೆ ಟಿ20 ವಿಶ್ವಕಪ್ ಕಿರೀಟ: ರೋಹಿತ್ ಪಡೆಗೆ ಬರೋಬ್ಬರಿ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್ 2024ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬರೋಬ್ಬರಿ 125 ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ.

ಬಾರ್ಬಡೋಸ್​​ನಲ್ಲಿ ಶನಿವಾರ ನಡೆದ ವಿಶ್ವ ಕಪ್​ನ ಫೈನಲ್​ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್​ಗಳಿಂದ ಸೋಲಿಸುವ ಮೂಲಕ ಭಾರತೀಯ ಪುರುಷರ ಕ್ರಿಕೆಟ್ ತಂಡವು ಎರಡನೇ ಬಾರಿ ಟಿ20 ವಿಶ್ವ ಕಪ್​ ಗೆದ್ದುಕೊಂಡಿತು. 2007ರಲ್ಲಿ ಧೋನಿ ನೇತೃತ್ವದಲ್ಲಿ ಭಾರತ ತಂಡ ಉದ್ಘಾಟನಾ ಆವೃತ್ತಿಯ ವಿಶ್ವ ಕಪ್​ ಗೆದ್ದುಕೊಂಡಿತ್ತು.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ವಿಜೇತ ತಂಡಕ್ಕೆ 125 ಕೋಟಿ ರೂ.ಗಳ ಬಹುಮಾನವನ್ನು ಘೋಷಿಸಿದ್ದಾರೆ. ಭಾರತದ ಅತ್ಯುತ್ತಮ ಸಾಧನೆಗೆ ನೀಡಿದ ಕೊಡುಗೆಗಾಗಿ ಆಟಗಾರರು ಮತ್ತು ಎಲ್ಲಾ ಕೋಚಿಂಗ್ ಸಿಬ್ಬಂದಿಯನ್ನು ಅವರು ಅಭಿನಂದಿಸಿದ್ದಾರೆ.

‘ಐಸಿಸಿ ಪುರುಷರ ಟಿ 20 ವಿಶ್ವಕಪ್ 2024 ಅನ್ನು ಗೆದ್ದ ಟೀಮ್ ಇಂಡಿಯಾಕ್ಕೆ 125 ಕೋಟಿ ರೂ.ಗಳ ಬಹುಮಾನದ ಮೊತ್ತವನ್ನು ಘೋಷಿಸಲು ನನಗೆ ಸಂತೋಷವಾಗಿದೆ ಎಂದು ಜಯ್ ಶಾ ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಬರೆದಿದ್ದಾರೆ. ತಂಡವು ಪಂದ್ಯಾವಳಿಯುದ್ದಕ್ಕೂ ಅಸಾಧಾರಣ ಪ್ರತಿಭೆ, ದೃಢನಿಶ್ಚಯ ಮತ್ತು ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿದೆ. ಈ ಅಸಾಧಾರಣ ಸಾಧನೆಗಾಗಿ ಎಲ್ಲಾ ಆಟಗಾರರು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಗೆ ಅಭಿನಂದನೆಗಳು ಎಂದು ಅವರು ಬರೆದುಕೊಂಡಿದ್ದಾರೆ.

https://x.com/JayShah/status/1807415146760818693?ref_src=twsrc%5Etfw%7Ctwcamp%5Etweetembed%7Ctwterm%5E1807415146760818693%7Ctwgr%5E1a662b095c4baf93498d0287b30c21715de45a2f%7Ctwcon%5Es1_&ref_url=https%3A%2F%2Fvistaranews.com%2Fvistara%2Fbcci-announces-prize-money-of-rs-125-crores-for-team-india-for-winning-icc-t20-world-cup%2F684828.html

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!