Saturday, March 25, 2023

Latest Posts

ಟಿ20 ವಿಶ್ವಕಪ್‌ ಫೈನಲ್: ಮತ್ತೆ ಆಸ್ಟ್ರೇಲಿಯಾ ಮಹಿಳಾ ತಂಡ ಚಾಂಪಿಯನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಹಿಳಾ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಮೂಲಕ ಆಸೀಸ್ ಮಹಿಳಾ ತಂಡವು 6ನೇ ಬಾರಿ ಕಿರೀಟವನ್ನು ಮುಡಿಗೇರಿಸಿಕೊಂಡಂತಾಗಿದೆ.

ಟಾಸ್ ಗೆದ್ದ ಆಸ್ಟ್ರೇಲಿಯಾ0 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 156 ರನ್ ಕಲೆಹಾಕಿತ್ತು. ಇದನ್ನ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ್ತಿ ತಜ್ಮಿನ್ ಬ್ರಿಟ್ಸ್ (10) ಬೇಗನೆ ಔಟಾದರು. ಮರಿಜಾನ್ನೆ ಕಪ್ (11) ಗಾರ್ಡ್ನರ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಇನ್ನು 4ನೇ ಕ್ರಮಾಂಕದಲ್ಲಿ ಆಡಿದ ನಾಯಕಿ ಸುನೆ ಲೂಸ್ (2) ರನೌಟ್​ಗೆ ಬಲಿಯಾದರು.ಮತ್ತೊಂದೆಡೆ ಏಕಾಂಗಿಯಾಗಿ ಹೋರಾಟ ಮುಂದುವರೆಸಿದ ಲಾರಾ ವೊಲ್ವಾರ್ಡ್ಟ್ 61 ರನ್​ ಗಳಿಸಿದರು.

ಅಂತಿಮವಾಗಿ 3 ಓವರ್​ಗಳಲ್ಲಿ ಸೌತ್ ಆಫ್ರಿಕಾ ತಂಡಕ್ಕೆ 43 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಆಸ್ಟ್ರೇಲಿಯಾ ಬೌಲರ್​ಗಳು ಹಿಡಿತ ಸಾಧಿಸಿದರು.

ಕೊನೆಯ 6 ಎಸೆತಗಳಲ್ಲಿ 27 ರನ್​ಗಳು ಬೇಕಿತ್ತು. ಆದರೆ ಫೈನಲ್ ಓವರ್ ಎಸೆದ ಆಶ್ಲೀ ಗಾರ್ಡ್ನರ್ ಕೇವಲ 7 ರನ್​ ನೀಡಿದರು. ಇದರೊಂದಿಗೆ ಆಸ್ಟ್ರೇಲಿಯಾ ತಂಡವು 19 ರನ್​ಗಳ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಆಸೀಸ್ ತಂಡವು ಮಹಿಳಾ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!