ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ನ ಸೂಪರ್ 12ರ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ಭರ್ಜರಿಯಾಗಿ ಜಯ ಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ.
ನ್ಯೂಜಿಲೆಂಡ್ ನೀಡಿದ್ದ 168 ರನ್ಗಳ ಸವಾಲಿನ ಮೊತ್ತ ಬೆನ್ನತ್ತಿದ ಶ್ರೀಲಂಕಾ ತಂಡ ಆರಂಭದಲ್ಲಿಯೇ ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಅಂತಿಮವಾಗಿ 19.1 ಓವರ್ಗಳಲ್ಲಿ 102 ರನ್ಗಳಿಗೆ ಆಲೌಟ್ ಆಯಿತು. ಈ ಮೂಲಕ ನ್ಯೂಜಿಲೆಂಡ್ ತಂಡ 65 ರನ್ಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿತು.
ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿ, ಶ್ರೀಲಂಕಾ ತಂಡಕ್ಕೆ 168 ರನ್ಗಳ ಗುರಿ ನೀಡಿತ್ತು.
ನ್ಯೂಜಿಲೆಂಡ್ನ ಗ್ಲೆನ್ ಫಿಲಿಪ್ಸ್ (104) ಆಕರ್ಷಕ ಶತಕದ ನೆರವಿನಿಂದ ಶ್ರೀಲಂಕಾ ವಿರುದ್ಧ ಸವಾಲಿನ ಮೊತ್ತ ಗಳಿಸಿತು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ